ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸಂಪರ್ಕ ರಸ್ತೆಯನ್ನು ಅಗಲೀಕರಣಗೊಳಿಸಿ,ಆಯ್ದ ಭಾಗಗಳಿಗೆ ರೂ.2 ಕೋಟಿ ಅನುದಾನದಲ್ಲಿ ಮಾಡಲಾದ ಡಾಮರೀಕರಣದ ಕಾಮಗಾರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಉದ್ಘಾಟಿಸಿದರು. ಇದನ್ನೂ ಓದಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಉಚಿತ ವಾಟರ್ ಬೆಡ್ ವಿತಣೆ
ಈ ಸಂದರ್ಭದಲ್ಲಿ ಬಿಜೆಪಿ ಮಂಡಲದ ಅಧ್ಯಕ್ಷ ಚೆನ್ನಪ್ಪ ಕೋಟ್ಯಾನ್,ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಶೆಟ್ಟಿ, ಸುದರ್ಶನ ಬಜ, ಮಾಧ್ಯಮ ಪ್ರಮುಖ್ ಪುರುಷೋತ್ತಮ ಶೆಟ್ಟಿ
ಕಾವಳಪಡೂರು ಗ್ರಾ.ಪಂ.ಮಾಜಿ ಅಧ್ಯಕ್ಷ ಜಿನರಾಜ ಆರಿಗ, ಕಾವಳಪಡೂರು ಗ್ರಾ.ಪಂ.ಅಧ್ಯಕ್ಷ ಲಕ್ಮೀನಾರಾಯಣ ಶರ್ಮ, ಕಾವಳಮೂಡೂರು ಗ್ರಾ.ಪಂ.ಅಧ್ಯಕ್ಷ ಅಜಿತ್ ಶೆಟ್ಟಿ, ಕಾರಿಂಜ ದೇವಸ್ಥಾನದ ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಪುಳಿಮಜಲು, ಕಾವಳಮೂಡೂರು ಗ್ರಾ.ಪಂ.ಸದಸ್ಯರಾದ ರಾಜಗೋಪಾಲ್ ಪ್ರಭು, ಗಣೇಶ್ ಪುಂಡಿಕ್ಕು, ವೀಣಾ ಮತ್ತು ಜಯಲಕ್ಷ್ಮಿ ದೇವಾಡಿಗ, ಕಾವಳಪಡೂರು ಗ್ರಾ.ಪಂ.ಸದಸ್ಯರಾದ,ಪ್ರಮೋದ್ ಕುಮಾರ್ ರೈ,ಜಿನೇಂದ್ರ, ದೇವಸ್ಥಾನದ ಸಮಿತಿ ಸದಸ್ಯರಾದ ಜನಾರ್ದನ ಆಚಾರ್ಯ, ಬಿಜೆಪಿ ಪ್ರಮುಖರಾದ ಮೋಹನ್ ಆಚಾರ್, ಅನೂಪ್ ರಾಜ್ ಮಯ್ಯ,ಶರ್ಮಿತ್ ಜೈನ್, ತಿಮ್ಮಪ್ಪ ಶೆಟ್ಟಿ,ರಾಜೇಶ್ ಭಂಡಾರಿ ಪುಳಿಮಜಲು,ಎ.ಇ.ಇ.ಅವಿನಾಶ್, ಜೆ..ಇ.ಅರುಣ್ ಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.
