ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ವತಿಯಿಂದ ಬಾದಾಮಿ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಅಗ್ನಿಶಾಮಕ ಠಾಣೆಯ ಕಟ್ಟಡವನ್ನು ಗೃಹ ಸಚಿವ ಡಾ| ಜಿ.ಪರಮೇಶ್ವರ್  ಉದ್ಘಾಟಿಸಿದ ರು, ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ. ಇದನ್ನೂ ಓದಿ : ಪೊಲೀಸ್ ಕೌಶಲ್ಯ ಅಭಿವೃದ್ಧಿ ಕೇಂದ್ರ ಹಾಗೂ ಪೊಲೀಸ್ ಸಮುದಾಯ ಭವನ ಉದ್ಘಾಟನೆ
ಆಧುನಿಕ ತಂತ್ರಜ್ಞಾನಗಳನ್ನು ಹೊಂದಿರುವ ಅಗತ್ಯ ಉಪಕರಣ ಮತ್ತು ವಾಹನಗಳನ್ನು ಇಲಾಖೆಗೆ ನೀಡಲಾಗುವುದು. ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಸಿಬ್ಬಂದಿಗಳ ನೇಮಕಾತಿ ಕುರಿತ ಪ್ರಸ್ತಾವನೆ ಸರ್ಕಾರದ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದರು.
ರಾಜ್ಯದ 216 ತಾಲ್ಲೂಕುಗಳಲ್ಲಿ ಅಗ್ನಿಶಾಮಕ ಠಾಣೆಗಳಿವೆ. ಇನ್ನುಳಿದ ತಾಲ್ಲೂಕುಗಳಲ್ಲಿಯೂ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗುತ್ತಿದೆ. ಇಡೀ ದೇಶದಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಗೆ ಒಳ್ಳೆಯ ಹೆಸರಿದೆ ಎಂಬುದನ್ನು ತಿಳಿಸಿದೆ. ಇದನ್ನೂ ಓದಿ : ಅಹಮದಾಬಾದ್‌ನ ವಸತಿ ಪ್ರದೇಶದಲ್ಲಿ 242 ಪ್ರಯಾಣಿಕರಿದ್ದ ವಿಮಾನ ಪತನ
ಈ ಸಂದರ್ಭದಲ್ಲಿ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪುರ, ಶಾಸಕರಾದ ಭೀಮ್‌ಸೇನ್ ಚಿಮ್ಮನಕಟ್ಟಿ, ಮಾಜಿ ಶಾಸಕ ಆನಂದ್ ನ್ಯಾಮಗೌಡ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಡಿಐಜಿ ರವಿ ಡಿ.ಚನ್ನಣ್ಣನವರ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನಿರ್ದೇಶಕ ಶಿವಶಂಕರ್, ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥರೆಡ್ಡಿ ಅವರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.