ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿನ ಪೂರ್ವ ಪ್ರಾಥಮಿಕ( ಎಲ್ ಕೆ ಜಿ ಹಾಗೂ ಯುಕೆಜಿ ) ತರಗತಿ ಮಕ್ಕಳ ಪದಗ್ರಹಣ ಕಾರ್ಯಕ್ರಮ ಮಾರ್ಚ್ 28ನೇ ಶನಿವಾರ ಜರಗಿತು. ಇದನ್ನೂ ಓದಿ : ನರಿಕೊಂಬು ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳಿಗೆ ತರಬೇತಿ ಕಾರ್ಯಗಾರ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಅಂಚನ್ ವಹಿಸಿದ್ದರು.

ಕಾರ್ಯಕ್ರಮ ವನ್ನು ಉದ್ಘಾಟಿಸಿ ಪದಗ್ರಹಣವನ್ನು ನೆರವೇರಿಸಿದ ಬಿಸಿ ರೋಡಿನ ನ್ಯಾಯವಾದಿ ಅಶ್ವಿನ್ ಕುಮಾರ್ ರೈ ಮಾತನಾಡಿ ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿ ಪದವಿ ಅನ್ನುವ ಪರಿಕಲ್ಪನೆಯನ್ನು ಕಲ್ಪಿಸಿ ಮಕ್ಕಳಿಗೆ ಕಲಿಕೆಯ ಪ್ರೋತ್ಸಾಹಿಸಲು ಉತ್ತಮವಾದ ಕಾರ್ಯಕ್ರಮವಾಗಿದ್ದು, ಮಕ್ಕಳ ಪೋಷಕರು ಶಾಲೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವನ್ನು ಕಲಿಸಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುವ ಜವಾಬ್ದಾರಿ ಪೋಷಕರಲ್ಲಿದೆ ಎಂದರು.

ಈ ಸಂದರ್ಭದಲ್ಲಿ ಕೆಜಿ ಮಕ್ಕಳಿಂದ 2025- 26ನೇ ಸಾಲಿನ ಕಲಿಕಾ ಚಟುವಟಿಕೆಗಳ ಪ್ರದರ್ಶನ ಜರಗಿತು.

ಕಾರ್ಯಕ್ರಮದ ವೇದಿಕೆಯಲ್ಲಿ ತಾಯಂದಿರ ಸಮಿತಿಯ ಅಧ್ಯಕ್ಷೆ ಉಷಾಲಕ್ಷಿ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಲಕ್ಷ್ಮೀಪ್ರಕಾಶ್,ಹಿರಿಯ ಶಿಕ್ಷಕಿ ಸುಜಾತ, ಉಪಸ್ಥಿತರಿದ್ದರು.

ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ಮಕ್ಕಳ ಪೋಷಕರು ಶಾಲಾ ಶಿಕ್ಷಕ ವೃಂದ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ ಸ್ವಾಗತಿಸಿ, ಶಿಕ್ಷಕಿ ನಿಶಾ ವಂದಿಸಿದರು. ಶಿಕ್ಷಕಿ ದಿವ್ಯಶ್ರೀ ಕಾರ್ಯಕ್ರಮ ನಿರೂಪಿಸಿದರು.