ಬಂಟ್ವಾಳ: .ಬಿ.ಸಿ.ರೋಡ್‌ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನ ಟ್ರಸ್ಟ್ (ರಿ.) ಪೊಲೀಸ್ ಲೇನ್ ನ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವ ಫೆ.16 ರಿಂದ ಫೆ. 23 ರವರೆಗೆ ನಡೆಯಲಿದ್ದು ಕಾರ್ಯಕ್ರಮದ ಆಮಂತ್ರಣ ಪತ್ರವನ್ನು ಮಾಜಿ ಸಚಿವ ಬಿ.ರಮಾನಾಥ ರೈ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ದೇವಸ್ಥಾನದ ಕೆಲಸ ಕಾರ್ಯಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಮೂರು ಕೋಟಿಗಳಿಗೂ ಮಿಕ್ಕಿ ಜೀರ್ಣೋದ್ಧಾರ ಕಾರ್ಯಕ್ಕೆ ವಿನಿಯೋಗಿಲಾಗಿದ್ದು, ಸರ್ವರ ಸಹಕಾರದಿಂದ ನಡೆದಿದೆ ಎಂದು ತಿಳಿಸಿದರು.

ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಬಂಟ್ವಾಳ ಡಿ.ವೈ.ಎಸ್.ಪಿ.ವಿಜಯಪ್ರಸಾದ್, ವ್ಯವಸ್ಥಾಪನ ಸಮಿತಿ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಶೆಟ್ಟಿ, ಚಂಡಿಕಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಲೋಕನಾಥ ಶೆಟ್ಟಿ, ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ವಿಶ್ವನಾಥ ಪೂಜಾರಿ, ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್ ಮಾದಕಟ್ಟೆ ಮತ್ತಿತರರು ಉಪಸ್ಥಿತರಿದ್ದರು.