ಶ್ರೀ ಸದ್ಗುರು ನಿತ್ಯಾನಂದ ಗೋವಿಂದ ಸ್ವಾಮಿ ಮಂದಿರ ಟ್ರಸ್ಟ್ ನಿತ್ಯಾನಂದ ನಗರ, ಬೈಪಾಸ್, ಬಂಟ್ವಾಳದಲ್ಲಿ ಜ.22ರಂದು ಅಯ್ಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಭಜನಾ ಸಂಕೀರ್ತನೆ ನಡೆಯಲಿದೆ.
ಕಾರ್ಯಕ್ರಮದ ಪ್ರಯುಕ್ತ ಬೆಳಗ್ಗೆ ಗಂಟೆ 7.30ರಿಂದ ಪ್ರತಃ ಪೂಜೆ, ಬೆಳಗ್ಗೆ ಗಂಟೆ 9 ರಿಂದ ಮಧ್ಯಾಹ್ನ ಗಂಟೆ 12.15ಕ್ಕೆ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಗಂಟೆ 12.30ಕ್ಕೆಮಹಾ ಪೂಜೆ ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 1.00 ರಿಂದ ಅನ್ನಸಂತರ್ಪಣೆ, ಸಂಜೆ ಗಂಟೆ 6.30 ರಿಂದ ದೀಪೋತ್ಸವ, ಸಂಜೆ ಗಂಟೆ 7.00 ರಿಂದ ಭಜನಾ ಕಾರ್ಯಕ್ರಮ, ರಾತ್ರಿ 8.00ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.