ಬಂಟ್ವಾಳ ಫೆ.10: ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕರ್ನಾಟಕ ರಾಜ್ಯ ಸಂಚಾಲಕರಾಗಿ ಹಿರಿಯ ಪತ್ರಕರ್ತ ಕವಿ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಎಸ್.ವಿ.ಎಸ್.ದೇವಳ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಇವರು ರಾಜ್ಯ ಮತ್ತು ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.
ಬಂಟ್ವಾಳ ತಾಲೂಕು ಕನ್ನಡಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿರುವ ಇವರು ಕರ್ನಾಟಕ ಚುಟುಕು ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿದ್ದಾರೆ.
ಹಿರಿಯ ಸಾಹಿತಿಯಾಗಿ ಗುರುತಿಸಲ್ಪಟ್ಟಿರುವ ಇವರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹಲವು ಸಾಹಿತ್ಯಗೋಷ್ಠಿಗಳಲ್ಲಿ , ಭಾಗವಹಿಸಿರುತ್ತಾರೆ. ಇವರ ಭಾವ ಬಿಂದು ಕವನಸಂಕಲನವು ಕಥಾಬಿಂದು ಪ್ರಕಾಶನದಿಂದ ನೇಪಾಳ ದೇಶದಲ್ಲಿ ಬಿಡುಗಡೆಯಾಗಿತ್ತು.