ಕಲ್ಲಡ್ಕ ಶ್ರೀ ರಾಮ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ “ಸಿ.ಇ.ಟಿ ವಿದ್ಯಾರ್ಥಿ ಮಿತ್ರ” ತರಬೇತಿ ಕಾರ್ಯಕ್ರಮ ಜ.3 ರಂದು ನಡೆಯಿತು.

ಸರ್ಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ಪ್ರಾಂಶುಪಾಲ ಶ್ರೀಧರ್ ಕಾರ್ಯಕ್ರಮ ಉದ್ಘಾಟಿಸಿ ತರಬೇತಿಯ ಮಹತ್ವವನ್ನು ತಿಳಿಸಿದರು.

ವೇದಿಕೆಯಲ್ಲಿ ಶ್ರೀರಾಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಸಂತ್ ಬಲ್ಲಾಳ್ ಮತ್ತು ಸಂಪನ್ಮೂಲ ವ್ಯಕ್ತಿ ಬೆಂಜನಪದವು ಪದವಿ ಪೂರ್ವ ಕಾಲೇಜಿನ ರಸಾಯನಶಾಸ್ತ್ರ ಉಪನ್ಯಾಸಕಿ ಸಂಧ್ಯಾರಾಣಿ ಉಪಸ್ಥಿತರಿದ್ದರು.

ಭೌತಶಾಸ್ತ್ರ ಉಪನ್ಯಾಸಕಿ ನಂದಾ ಕಾರ್ಯಕ್ರಮ ನಿರ್ವಹಿಸಿದರು.