ತಮಿಳಿನಿಂದ ಕನ್ನಡ ಹುಟ್ಟಿದ್ದು ಎಂದು ಮಾತನಾಡಿದ್ದ ಕಮಲ್ ಹೇಳಿಕೆಗೆ ಕನ್ನಡಪರ ಸಂಘಟನೆಗಳು ಕ್ಷಮೆ ಯಾಚಿಸುವಂತೆ ಫಿಲ್ಮ್ ಚೇಂಬರ್‌ಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಕನ್ನಡ ಭಾಷೆಗೆ 4ರಿಂದ 5 ಸಾವಿರ ವರ್ಷಗಳ ಇತಿಹಾಸವಿದೆ. ಅವರು ಆಡಿದ ಮಾತಿನಿಂದ ದ್ರಾವಿಡ ಭಾಷೆಗಳು ಒಗ್ಗಟ್ಟಿಗೆ ದಕ್ಕೆಯಾಗಿದೆ. ಕಮಲ್ ಅತ್ಯುತ್ತಮ ಕಲಾವಿದ, ಅವರು ಕನ್ನಡ ಚಿತ್ರಗಳಲ್ಲೂ ನಟಿಸಿದ್ದಾರೆ. ನಟನ ಮಾತಿನಿಂದ ಕನ್ನಡಿಗರು, ತಮಿಳರ ನಡುವೆ ದ್ವೇಷ ಹುಟ್ಟುವಂತೆ ಮಾಡಿದ್ದಾರೆ. ತಕ್ಷಣ ತಮ್ಮ ತಪ್ಪನ್ನ ಅವರು ತಿದ್ದುಕೊಂಡು ಕನ್ನಡಿಗರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಕ್ಷಮೆಯಾಚಿಸದಿದ್ದರೆ ‘ಥಗ್ ಲೈಫ್’ ಚಿತ್ರದ ರಿಲೀಸ್‌ಗೆ ತಡೆ ನೀಡೋದಾಗಿ ಕರವೇ ಮತ್ತು ಕನ್ನಡಪರ ಸಂಘಟನೆ ಎಚ್ಚರಿಸಿದೆ.
ಇದನ್ನೂ ಓದಿ: ಬಾಳ್ತಿಲ ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು
ಮೇ 27ರಂದು ಬೆಂಗಳೂರಿನಲ್ಲಿ ನಡೆದ ‘ಥಗ್ ಲೈಫ್’ ಪ್ರಚಾರ ಕಾರ್ಯಕ್ಕೆ ನಟ ಶಿವಣ್ಣ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ, ರಾಜ್‌ಕುಮಾರ್ ಜೊತೆಗಿನ ಒಡನಾಡವನ್ನು ಕಮಲ್ ಹಾಸನ್ ಸ್ಮರಿಸಿದರು. ಬಳಿಕ ಶಿವಣ್ಣ ಎದುರೇ ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದು ನಟ ಹೇಳಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ನಮಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದ ಕಮಲ್ ಹೇಳಿಕೆಗೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕಮಲ್ ಆಡಿರುವ ಮಾತುಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ.