ಬೆಂಗಳೂರು: ಕನ್ನಡ ನಟ ಸುದೀಪ್ ಅವರ ತಾಯಿ ಸರೋಜಾ ಅವರು ಭಾನುವಾರ ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರು 80 ರ ಹರೆಯದಲ್ಲಿದ್ದರು ಮತ್ತು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ಆಸ್ಪತ್ರೆ ಮತ್ತು ಕುಟುಂಬದ ಮೂಲಗಳು ತಿಳಿಸಿವೆ.

ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಜೆಪಿ ನಗರದ ನಿವಾಸಕ್ಕೆ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಹಿತೈಷಿಗಳಿಗೆ ಅಂತಿಮ ನಮನ ಸಲ್ಲಿಸಲು ತರಲಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.

ಅಂತಿಮ ನಮನ ಸಲ್ಲಿಸಲು ಚಿತ್ರರಂಗದ ಹಲವಾರು ಗಣ್ಯರು ಆಗಮಿಸಿದ್ದು., ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಸುದೀಪ್ ಕುಟುಂಬಕ್ಕೆ ಆತ್ಮೀಯರಾಗಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭಾಗವಹಿಸಿ ಅಂತಿಮ ನಮನ ಸಲ್ಲಿಸಿದರು.

ಅವರ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಜೆಪಿ ನಗರದ ನಿವಾಸಕ್ಕೆ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಹಿತೈಷಿಗಳಿಗೆ ಅಂತಿಮ ನಮನ ಸಲ್ಲಿಸಲು ತರಲಾಗಿದ್ದು, ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.