ಶಿವಮೊಗ್ಗ: ಕಾಂತಾರ ಚಾಪ್ಟರ್-1 (Kantara Chapter-1) ಚಿತ್ರದ ಸಹಕಲಾವಿದ ವಿಜು ವಿ.ಕೆ (Viju VK) ಹೃದಯಾಘಾತದಿಂದ (Heart Attack) ಶಿವಮೊಗ್ಗದಲ್ಲಿ ಸಾವನ್ನಪ್ಪಿದ್ದಾರೆ.

ಕೇರಳದ (Kerala) ತ್ರಿಶೂರ್ ಮೂಲದ ಮಿಮಿಕ್ರಿ ಕಲಾವಿದ ವಿಜು ಕಾಂತರ ಚಲನಚಿತ್ರಕ್ಕಾಗಿ ಆಗುಂಬೆ ಸಮೀಪದ ಯಡೂರಿನ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಬುಧವಾರ ರಾತ್ರಿ ಏಕಾಏಕಿ ವಿಜು ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸುವ ವೇಳೆ ಮಾರ್ಗ ಮಧ್ಯೆ ವಿಜು ಕೊನೆಯುಸಿರೆಳೆದಿದ್ದಾರೆ.  ಇದನ್ನೂ ಓದಿ : ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

ಸದ್ಯ ವಿಜು ಅವರ ಮೃತದೇಹ ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿರಿಸಲಾಗಿದೆ. ಪೊಲೀಸರು ಕೇರಳದಿಂದ ವಿಜು ಕುಟುಂಬಸ್ಥರ ಆಗಮನಕ್ಕೆ ಕಾಯುತ್ತಿದ್ದಾರೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೇ ತಿಂಗಳಲ್ಲಿ ಇದೇ ಚಿತ್ರದಲ್ಲಿ ಅಭಿನಯಿಸಿದ್ದ ಕಾಮಿಡಿ ಕಿಲಾಡಿ ಖ್ಯಾತಿಯ ರಾಕೇಶ್ ಪೂಜಾರಿ ಕೂಡ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದರು. ಇದನ್ನೂ ಓದಿ :International Lynx Day ಜೂ.11 ಅಂತರಾಷ್ಟ್ರೀಯ ಲಿಂಕ್ಸ್ (ಕಾಡು ಬೆಕ್ಕು) ದಿನ