ಸಾಂಸ್ಕೃತಿಕ ಹಾಗೂ ಪರಂಪರೆಯ ಹೆಗ್ಗುರುತು ಸಾರುವ ಬೆಂಗಳೂರು ಕರಗ (Bengaluru Karaga) ಶಕ್ತೋತ್ಸವ ಶನಿವಾರ ಮಧ್ಯರಾತ್ರಿ ಶ್ರದ್ಧಾಭಕ್ತಿಯಿಂದ ನೆರವೇರಿತು.

ಅರ್ಚಕರಾದ ಎ.ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗ ಹೊತ್ತು ಹೆಜ್ಜೆ ಹಾಕಿದರು.

ಕರಗದ ಪ್ರಸಿದ್ಧ ದ್ರೌಪದಿ ದೇವಿ ಕರಗ ಶಕ್ತ್ಯೋತ್ಸವವು ಚೈತ್ರ ಪೌರ್ಣಿಮೆಯ ಬೆಳದಿಂಗಳಲ್ಲಿ ನಡೆಯಿತು. ಮಲ್ಲಿಗೆ ಕಂಪು ಸೂಸುತ್ತ ಹೊರಟ ಕರಗಕ್ಕೆ ಗೋವಿಂದ.. ಗೋವಿಂದ… ನಾಮಸ್ಮರಣೆಯೊಂದಿಗೆ ಮಧ್ಯರಾತ್ರಿ ಸುಮಾರು 12.30 ರಿಂದ 1ರ ಸುಮಾರಿಗೆ ಹೊರಟ ಕರಗ ಮೆರವಣಿಗೆಯ (Karaga Procession) ದರ್ಶನ ಪಡೆದು ಲಕ್ಷಾಂತರ ಭಕ್ತರು ಪುನೀತರಾದರು.
ಅರ್ಚಕರಾದ ಎ.ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗ ಹೊತ್ತು ಹೆಜ್ಜೆ ಹಾಕಿದರು. ಮೆರವಣಿಗೆಯುದ್ದಕ್ಕೂ ವೀರಕುಮಾರರು ಸಾಗಿದರು.