ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಪ್ರಸೂತಿ ತಜ್ಞರು ಹಾಗೂ ಅರಿವಳಿಕೆ ತಜ್ಞರ ಹುದ್ದೆಗೆ ಶೀಘ್ರವಾಗಿ ಭರ್ತಿಮಾಡುವಂತೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಕೆ.ಡಿ.ಪಿ.ಸಭೆಯಲ್ಲಿ ಪ್ರಸ್ತಾಪಿಸಿದರು. ಇದನ್ನೂ ಓದಿ : ಬಾಲಕರ ಉಚಿತ ವಿದ್ಯಾರ್ಥಿ ನಿಲಯದ ಉದ್ಘಾಟನೆ

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ
ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರು ಸಚಿವರ ಗಮನಕ್ಕೆ ತಂದರು.
ಎರಡು ಪ್ರಮುಖ ಹುದ್ದೆಯಲ್ಲಿ ಸೇವೆ ಸಲ್ಲಿಸುವವರಿಲ್ಲದೆ ತಾಲೂಕಿನ ಜನತೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಸುಮಾರು 50℅ ಮಹಿಳೆಯರು ಹೆರಿಗೆಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಬಹಳ ಅಗತ್ಯವಾಗಿ ಹುದ್ದೆಗಳನ್ನು ಭರ್ತಿಮಾಡುವಂತೆ ಸಚಿವರಿಗೆ ತಿಳಿಸಿದರು.
ಶಾಸಕರ ಮಾತಿಗೆ ಸ್ಪಂದಿಸಿದ ಉಸ್ತುವಾರಿ ಸಚಿವರು ಆರೋಗ್ಯ ಇಲಾಖೆಯ ಅಧಿಕಾರಿಗಳಲ್ಲಿ ಈ ಬಗ್ಗೆ ಮಾಹಿತಿ ಪಡೆದು, ತಿಂಗಳೊಳಗೆ ಎರಡು ಹುದ್ದೆಯನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದರು.
ಇದರ ಜೊತೆಗೆ ಜಿಲ್ಲೆಯಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಮತ್ತು ನಿರುದ್ಯೋಗ ಸೃಷ್ಟಿ ಮಾಡಿದ ಮರಳು ಮತ್ತು ಕೆಂಪುಕಲ್ಲಿನ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ಒಕ್ಕೊರಲಿನಿಂದ ಆಗ್ರಹ ಮಾಡಿದರು .