ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ನಡೆದ ಕೊಡೆತ್ತೂರು ಶ್ರೀ ಅರಸು ಕುಂಜರಾಯ ದೈವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಮುಖ್ಯ ಅತಿಥಿಯಾಗಿ ಭಾಗವಹಿಸಿ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಕಟೀಲು ದೇವಸ್ಥಾನದ ಪ್ರಮುಖ ಅಸ್ರಣ್ಣರುಗಳು, ಶಾಸಕರಾದ ಶ್ರೀ ಉಮಾನಾಥ ಕೋಟ್ಯಾನ್, ಪ್ರಮುಖರಾದ ಶ್ರೀ ಈಶ್ವರ ಕಟೀಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.