ಬಂಟ್ವಾಳ ತಾಲೂಕು ಸಿದ್ದಕಟ್ಟೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.), ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸಿದ್ದಕಟ್ಟೆ ವಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ 19ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಕೋರ್ಯಾರು ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷ ಅರ್ಕಕೀರ್ತಿ ಇಂದ್ರ ಅವರ ಅಧ್ಯಕ್ಷತೆಯಲ್ಲಿ ಜ.28 ರಂದು ಜರಗಿತು.

ಧಾರ್ಮಿಕ ಉಪನ್ಯಾಸವನ್ನು ನೀಡಿದ ನಿವೃತ್ತ ಶಿಕ್ಷಕ ಮುನಿರಾಜ ರೆಂಜಾಳ “ಮಾನವ ಧರ್ಮವನ್ನು ಪಾಲಿಸಿ. ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಬಾಗಿಗಳಾಗಿ ಎಂದರು.

ಮುಖ್ಯ ಅಥಿತಿಗಳಾಗಿ ಭಾಗವಹಿಸಿದ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಮಾಧವ ಗೌಡ ಯೋಜನೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ದುರ್ಗಾ ಮಹಮ್ಮಾಯಿ ದೇವಸ್ಥಾನದ ಆಡಳಿತ ಮುಕ್ತೇಸರಾದ ಗೋಪಾಲ್ ಗೌಡ ಕೋರ್ಯಾರು, ಸಿದ್ಧಕಟ್ಟೆ ವಲಯ ಅಧ್ಯಕ್ಷರಾದ ಸುರೇಶಅಂಚನ್, ಜನಜಾಗೃತಿ ವೇದಿಕೆ ಸಿದ್ದಕಟ್ಟೆ ವಲಯ ಅಧ್ಯಕ್ಷರಾದ ಸದಾನಂದ ಶೀತಲ್, ವಲಯ ಮೇಲ್ವಿಚಾರಕ ಶಿವರಂಜನ್ ಕೆ ಉಪಸ್ಥಿತರಿದ್ದರು.

ಸುಧಾಕರ್ ಶೆಟ್ಟಿ ಕುಕ್ಕಿಪಾಡಿ ಸ್ವಾಗತಿಸಿ, ಸುರೇಶ್ ಅಂಚನ್ ವಂದಿಸಿದರು. ಸಿದ್ಧಕಟ್ಟೆ ವಲಯಕ್ಕೆ ಸಂಬಂಧಪಟ್ಟ ಒಕ್ಕೂಟಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.