ಬಂಟ್ಟಾಳ: ವಗ್ಗದ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆದ ಕಿಸಾನ್ ಗೋಷ್ಟಿ ಹಾಗೂ ಕೃಷಿ ಇಲಾಖೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭಾಗವಹಿಸಿದರು. ,ಇದನ್ನೂ ಓದಿ: ಬಿಜೆಪಿ ಬಂಟ್ವಾಳ ಮಹಿಳಾ ಮೋರ್ಚಾದಿಂದ ‘ಆಟಿದ ಗಮ್ಮತ್ತು’ ವಿನೂತನ ಕಾರ್ಯಕ್ರಮ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಬಂಟ್ವಾಳ ಹಾಗೂ ಕಾವಳಪಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಜಂಟಿ ಸಹಭಾಗಿತ್ವದಲ್ಲಿ 2026–27ನೇ ಸಾಲಿನ ಆತ್ಮ ಯೋಜನೆಯಡಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಕೃಷಿಯನ್ನು ಆಧುನಿಕ ಹಾಗೂ ಲಾಭದಾಯಕ ಕ್ಷೇತ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಯುವಜನತೆ ತಂತ್ರಜ್ಞಾನ, ಯಾಂತ್ರೀಕರಣ ಮತ್ತು ವೈಜ್ಞಾನಿಕ ಕೃಷಿ ಪದ್ಧತಿಗಳತ್ತ ಗಮನಹರಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಕರೆ ನೀಡಿದರು.

ರೈತರಿಗೆ ಬೆಳೆ ವಿಮೆ, ಬೆಳೆ ಸಮೀಕ್ಷೆ ಹಾಗೂ ವಿವಿಧ ಕೃಷಿ ಇಲಾಖೆಯ ಯೋಜನೆಗಳ ಕುರಿತು ಮಾಹಿತಿ ನೀಡುವುದರೊಂದಿಗೆ ಸಾಂಕೇತಿಕವಾಗಿ ಇಲಾಖಾ ಸೌಲಭ್ಯಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬೀಜ ಹಾಗೂ ಸಾವಯವ ಪ್ರಮಾಣನ ಸಂಸ್ಥೆ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಸುಲೋಚನಾ ಜಿ.ಕೆ. ಭಟ್, ಅಬುಬಕ್ಕರ್ ಅಮ್ಮುಂಜೆ, ಪ್ರಮೋದ್‌ಕುಮಾರ್ ರೈ, ಪದ್ಮರಾಜ ಬಲ್ಲಾಳ್ ಮಾವಂತೂರು, ಸಹಾಯಕ ಕೃಷಿ ನಿರ್ದೇಶಕಿ ವೀಣಾ ಕೆ.ಆರ್. ಸೇರಿದಂತೆ ಕೃಷಿ ಇಲಾಖೆ ಅಧಿಕಾರಿಗಳು, ಸಹಕಾರ ಸಂಘದ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

ಅನ್ನದಾತನ ಬದುಕು ಬಲಿಷ್ಠವಾದರೆ, ನಮ್ಮ ಸಮಾಜವೂ ಬಲಿಷ್ಠವಾಗುತ್ತದೆ.