ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ, ಕಲ್ಲಡ್ಕ ವಲಯ ಕ್ರೀಡಾಕೂಟ ಸಮಿತಿ ಹಾಗೂ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ಮಾಣಿ, ಇವುಗಳ ಸಂಯುಕ್ತ ಆಶ್ರಯದಲ್ಲಿ 14 ರಿಂದ 17 ವೈಯೋ ಮಿತಿಯೊಳಗಿನ ಬಾಲಕ -ಬಾಲಕಿಯರ ಬಂಟ್ವಾಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳ ಕ್ರೀಡಾಕೂಟ 2024 25 ಅಕ್ಟೋಬರ್ 28 ಮತ್ತು 29ರಂದು ಬಾಲ ವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇಲ್ಲಿ ಬೆಳಿಗ್ಗೆ ಗಂಟೆ 9:30 ರಿಂದ ನಡೆಯಲಿರುವುದು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕು ತಹಶೀಲ್ದಾರಾದ ಶ್ರೀಮತಿ ಅರ್ಚನಾ ಡಿ ಭಟ್ ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಬಾಲವಿಕಾಸ ಟ್ರಸ್ಟ್ ಮಾಣಿಯ ಅಧ್ಯಕ್ಷರಾದ ಶ್ರೀ ಪ್ರಹ್ಲಾದ್ ಶೆಟ್ಟಿ ಜೆ ಮಾಡಲಿರುವರು.

ಕ್ರೀಡಾಕೂಟಗಳು ನಿಗದಿತ ಸಮಯಕ್ಕೆ ಸರಿಯಾಗಿ ನಡೆಯಲಿರುವುದರಿಂದ ಬಂಟ್ವಾಳ ತಾಲೂಕಿನ ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಅರ್ಹತೆ ಪಡೆದ ವಿದ್ಯಾರ್ಥಿಗಳನ್ನು ಆಯಾ ಶಾಲಾ ಶಿಕ್ಷಕರು ಕ್ಲಪ್ತ ಸಮಯದಲ್ಲಿ ಇರುವಂತೆ ನೋಡಿಕೊಂಡು ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕಾಗಿ ಕ್ರೀಡಾಕೂಟದ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.