ರಾಯಚೂರಿನ ಬಿಜೆಪಿ ಜಿಲ್ಲಾ ಕಾರ್ಯಾಲಯಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೇಟಿ ನೀಡಿ ಮಾನ್ಯ ಪ್ರಧಾನಿ ಶ್ರೀ Narendra Modi ಜೀ ಅವರ ‘ಮನ್ ಕೀ ಬಾತ್’ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೀಕ್ಷಿಸಿದರು.
ಅಯೋಧ್ಯೆಯಲ್ಲಿ ನಡೆದ ಬಾಲರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮವು ದೇಶದ ಕೋಟ್ಯಂತರ ಜನರನ್ನು ಬೆಸೆದಿದೆ. ಎಲ್ಲರ ಭಾವನೆಯೂ ಒಂದೇ, ಎಲ್ಲರ ಭಕ್ತಿಯೂ ಒಂದೇ, ಎಲ್ಲರ ಮಾತಿನಲ್ಲೂ ರಾಮನೇ ಇದ್ದಾನೆ. ನಾಡಿನ ಹಲವರು ರಾಮಭಜನೆಗಳನ್ನು ಹಾಡಿ ರಾಮನಿಗೆ ಭಕ್ತಿ ಸಮರ್ಪಿಸಿದ್ದಾರೆ. ಜನವರಿ 22ರಂದು ಸಂಜೆ ಇಡೀ ದೇಶವು ರಾಮಜ್ಯೋತಿ ಬೆಳಗಿಸಿದ ಕುರಿತು ಸ್ಮರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ @rajugoudaNS, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ @PRajeevBJP, ಸಂಸದರಾದ ಶ್ರೀ ರಾಜಾ ಅಮರೇಶ್ವರ ನಾಯಕ್, ಶಾಸಕರಾದ ಶ್ರೀ ಶಿವರಾಜ್ ಪಾಟೀಲ್, ಮಾಜಿ ಶಾಸಕರಾದ ಶ್ರೀ ಪ್ರತಾಪ್ ಗೌಡ ಪಾಟೀಲ್, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.