ರಾಷ್ಟೀಯ ಸ್ವಯಂ ಸೇವಕ ಸಂಘದ ಶತಾಬ್ದಿ ಮತ್ತು ಮಾಜಿ ಪ್ರಧಾನಿ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ ಇವರ ಜನ್ಮಶತಾಬ್ದಿಯ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲ ಇದರ ವತಿಯಿಂದ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗದ ಶ್ರೀಮತಿ ಲತಾ ಪೂಜಾರಿ, ಕೆರೆಕೋಡಿ ಅವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆ “ಶ್ರೀರಾಮ ಕಾರುಣ್ಯ” ಇದರ ಹಸ್ತಾಂತರ ಮತ್ತು ಗೃಹ ಪ್ರವೇಶ ಕಾರ್ಯಕ್ರಮವನ್ನುಮಾ.3ರಂದು  ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯರಾದ ಡಾಕ್ಟರ್ ಕಲ್ಲಡ್ಕ ಪ್ರಭಾಕರ್ ಭಟ್ ಅವರು ದೀಪಾ ಪ್ರಜ್ವಲಿಸುವ ಮೂಲಕ ಉದ್ಘಾಟಿಸಲಿರುವರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ವಹಿಸಲಿದ್ದಾರೆ.   ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಮತ್ತು ಕಿಶೋರ್ ಕುಮಾರ್ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ, ಬಂಟ್ವಾಳ ಬಿಜೆಪಿ ಮಂಡಲದ ಅಧ್ಯಕ್ಷರಾದ ಆರ್, ಚೆನ್ನಪ್ಪ ಕೋಟ್ಯಾನ್, ಬಂಟ್ವಾಳ ಬಿಜೆಪಿ ಮಂಡಲದ ಸಹಕಾರಿ ಪ್ರಕೋಷ್ಠ ಇದರ ಸಂಚಾಲಕರಾದ ಜಯರಾಮ ರೈ ಬೋಳಂತೂರು ಮತ್ತು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.