ಆತ್ಮಾಹುತಿ ಬಾಂಬ್ ದಾಳಿ ಶಂಕೆ

ಇಸ್ಲಾಮಾಬಾದ್: ಶಾಂತಿ ರ‍್ಯಾಲಿಯ ವೇಳೆ ನಡೆದ ಭೀಕರ ಬಾಂಬ್ ಸ್ಫೋಟದಲ್ಲಿ (Bomb Blast) ಪೊಲೀಸ್ ಸಿಬ್ಬಂದಿ ಸೇರಿ 13 ಮಂದಿ ಸಾವನ್ನಪ್ಪಿದ್ದು, ಕನಿಷ್ಠ 18 ಮಂದಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ (Pakistan) ಖೈಬರ್ ಪಖ್ತುಂಖ್ವಾ (Khyber Pakhtunkhwa) ಪ್ರಾಂತ್ಯದಲ್ಲಿ ನಡೆದಿದೆ. ಇದನ್ನೂ ಓದಿ: ಭಾರೀ ಮಳೆಗೆ ಮನೆ ಛಾವಣಿ ಕುಸಿತ : ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಭೇಟಿ

 ಭೀಕರ ಸ್ಫೋಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಸ್ವಾತ್ ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ಒತ್ತಾಯಿಸಿ, ಸ್ಥಳೀಯ ಬುಡಕಟ್ಟು ಮಂಡಳಿಯಾದ ಸ್ವಾತ್ ಅಮನ್ ಜಿರ್ಗಾ ಈ ಶಾಂತಿ ರ‍್ಯಾಲಿಯನ್ನು ಆಯೋಜಿಸಿತ್ತು. ರ‍್ಯಾಲಿಯಲ್ಲಿ ಭಾಗವಹಿಸಿದ್ದವರು ಪ್ರದೇಶದಲ್ಲಿ ಶಾಂತಿ ಕಾಪಾಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಾ ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು.