ಗ್ಯಾಂಗ್‌ಟಕ್‌: ಈಶಾನ್ಯ ರಾಜ್ಯಗಳಲ್ಲಿ ಮಳೆಯ ಆರ್ಭಟ ಜೋರಾಗಿದೆ. ಈ ನಡುವೆ ಉತ್ತರ ಸಿಕ್ಕಿಂನಲ್ಲಿ ನಿರಂತರ ಮಳೆಯಿಂದಾಗಿ ಮಿಲಿಟರಿ ಶಿಬಿರಗಳಿರುವ‌ ಛಾತೆನ್‌ನಲ್ಲಿ  ಭೂಕುಸಿತ ಸಂಭವಿಸಿದ್ದು, ಮೂವರು ಸೈನಿಕರು ದುರ್ಮರಣಕ್ಕೀಡಾಗಿದ್ದಾರೆ. ಇದನ್ನೂ ಓದಿ :ಮಂಡ್ಯದಲ್ಲಿ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕಿ ಸಾವು ಆರೋಪ – ಮಿಮ್ಸ್ ವೈದ್ಯರ ವಿರುದ್ಧ ಕುಟುಂಬ ಆಕ್ರೋಶ

ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದ್ದು, ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನೂ 6 ಮಂದಿ ಸೈನಿಕರು (Soldiers) ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸೈನಿಕರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಇದನ್ನೂ ಓದಿ :ಮಂಗಳೂರಲ್ಲಿ ಕಡಲಬ್ಬರ – ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನೀರುಪಾಲು

ಇದುವರೆಗಿನ ಕಾರ್ಯಾಚರಣೆಯಲ್ಲಿ ಮೃತಪಟ್ಟ ಸೈನಿಕರಾದ ಹವ್ ಲಖ್ವಿಂದರ್ ಸಿಂಗ್, ಲ್ಯಾನ್ಸ್ ನಾಯಕ್ ಮುನೀಶ್ ಠಾಕೂರ್ ಮತ್ತು ಪೋರ್ಟರ್ ಅಭಿಷೇಕ್ ಲಖಾಡ ಅವರ ಮೃತದೇಹಗಳು ಪತ್ತೆಯಾಗಿವೆ. ರಕ್ಷಿಸಲಾದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ : ನಾರಾಯಣಗುರುಗಳ ಸಂದೇಶ ಯುವ ಸಮುದಾಯದ ಸ್ಪೂರ್ತಿಯ ಬೆಳಕು – ಪುರುಷೋತ್ತಮ್ ಪೂಜಾರಿ ಕಾರಾಜೆ

ಸಿಕ್ಕಿಂನಲ್ಲಿ ನಿರಂತರ ಮಳೆಯಿಂದ ಮತ್ತಷ್ಟು ಭೂಕುಸಿತವಾಗುತ್ತಿದ್ದು, ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಸೇನೆ ಕಳವಳ ವ್ಯಕ್ತಪಡಿಸಿದೆ. ಈ ಬೆನ್ನಲ್ಲೇ ಸಂಭಾವ್ಯ ಭೂಕುಸಿತ ಪ್ರದೇಶಗಳಲ್ಲಿರುವ ಸ್ಥಳೀಯರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚಿಸಿದೆ. ಇದನ್ನೂ ಓದಿ : ದಟ್ಟ, ನೀಲ ಕೂದಲು ನಿಮ್ಮದಾಗಬೇಕೆ ಬಳಸಿ ಭೃಂಗರಾಜ