ರಾಜ್ಯದ ಸಮಗ್ರ ಪ್ರಗತಿ ಪರಿಶೀಲನೆ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ರವರ ನೇತೃತ್ವದಲ್ಲಿ ನಡೆದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಯಿತು. ಇದನ್ನೂ ಓದಿ : ಪ್ರಧಾನಮಂತ್ರಿಗಳಿಂದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಭೇಟಿ
ಸಭೆಯಲ್ಲಿ ಮಳೆ ಮುಂಜಾಗ್ರತಾ ಕ್ರಮ, ಮುಂಗಾರು ಕೃಷಿ ಚಟುವಟಿಕೆಗಳಿಗೆ ಸಿದ್ಧತೆ, ಶಾಲಾ-ಕಾಲೇಜುಗಳ ಆರಂಭವಾಗುತ್ತಿರುವುದು ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಿ ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಲಾಯಿತು. ಇದನ್ನೂ ಓದಿ : ಮಂಗಳೂರಲ್ಲಿ ಕಡಲಬ್ಬರ – ನಾಡದೋಣಿ ಮಗುಚಿ ಇಬ್ಬರು ಮೀನುಗಾರರು ನೀರುಪಾಲು
ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ಸಚಿವರಾದ ಹೆಚ್.ಕೆ.ಪಾಟೀಲ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಎಂ.ಬಿ.ಪಾಟೀಲ್, ಈಶ್ವರ್ ಖಂಡ್ರೆ, ಡಾ. ಹೆಚ್.ಸಿ.ಮಹದೇವಪ್ಪ, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಬೈರತಿ ಸುರೇಶ್, ಜಮೀರ್ ಅಹ್ಮದ್ ಖಾನ್, ರಹೀಂ ಖಾನ್, ಲಕ್ಷ್ಮೀ ಹೆಬ್ಬಾಳ್ಕರ್ ರವರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸೇರಿದಂತೆ ಉನ್ನತಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.