ಬಳಿಕ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನೀಡಿದ ಸೂಚನೆಗಳು;
• ಹೊಸ ವರ್ಷಾಚರಣೆ ಸಂದರ್ಭದಲ್ಲಿ ಮಹಿಳೆಯರ ಸುರಕ್ಷತೆಗೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪೊಲೀಸ್ ಇಲಾಖೆ ಕೈಗೊಳ್ಳಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.
• ಹೊಸ ವರ್ಷಾಚರಣೆ ಬಳಿಕ ಜನರು ಸುಲಭವಾಗಿ ಜನರು ತಮ್ಮ ಮನೆಗಳಿಗೆ ಹಿಂತಿರುಗಲು ಅನುಕೂಲವಾಗುವಂತೆ ಮಧ್ಯರಾತ್ರಿ ಬಳಿಕ ಹೆಚ್ಚಿನ ಸಂಖ್ಯೆಯಲ್ಲಿ ಬಿಎಂಟಿಸಿ ಬಸ್‌ಗಳ ವ್ಯವಸ್ಥೆಯನ್ನು ಮಾಡಬೇಕು.
• ಭದ್ರತೆಗಾಗಿ 20 ಸಾವಿರ ಪೊಲೀಸರನ್ನು ಬೆಂಗಳೂರು ನಗರದಲ್ಲಿ ನಿಯೋಜಿಸಲಾಗುತ್ತಿದ್ದು, ಬೇರೆ ಜಿಲ್ಲೆಗಳಿಂದ 1,200 ಪೊಲೀಸರನ್ನು ಈ ಬಾರಿ ನಿಯೋಜಿಸುತ್ತಿದ್ದೇವೆ. ಮಹಿಳಾ ಪೊಲೀಸರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಚೆನ್ನಮ್ಮ ಪಡೆಗಳನ್ನು ಸಕ್ರಿಯವಾಗಿ ನಿಯೋಜಿಸಬೇಕು.
• ನಗರದಲ್ಲಿ ಹೊಸ ವರ್ಷಾಚರಣೆ ಸುಗಮವಾಗಿ ನಡೆಯಲು ಸಾಧ್ಯವಾಗುವಂತೆ 4 ಕಂಟ್ರೋಲ್ ರೂಂ, 78 ಕಾವಲು ಗೋಪುರ, 164 ಮಹಿಳಾ ಸಹಾಯ ಡೆಸ್ಕ್, 55 ಆ್ಯಂಬುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಕಳೆದ ಮೂರು ದಿನಗಳಲ್ಲಿ 3,500 ಡ್ರಿಂಕ್ ಆಂಡ್ ಡ್ರೈವ್ ಪ್ರಕರಣಗಳನ್ನು ದಾಖಲಿಸಲಾಗಿದೆ.
• ಹೊಸ ವರ್ಷವನ್ನು ಸಂಭ್ರಮದ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬರಮಾಡಿಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸುವುದು ನಮ್ಮೆಲ್ಲರ ಜವಾಬ್ದಾರಿ.
ಗೃಹ ಸಚಿವರಾದ ಡಾ|| ಜಿ.ಪರಮೇಶ್ವರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ||ಶಾಲಿನಿ ರಜನೀಶ್, ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ.ಎಂ.ಎ.ಸಲೀಂ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ ರಾವ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.