ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ.)ವಿಟ್ಲ ಯೋಜನಾ ಕಚೇರಿ ವ್ಯಾಪ್ತಿಯ ತಾಲೂಕು ಮಟ್ಟದ ಒಕ್ಕೂಟಗಳ ಅಧ್ಯಕ್ಷರುಗಳ ಸಭೆಯು ವಿಟ್ಲ ಶ್ರೀ ಗಜಾನನ ಸಭಾ ಭವನದಲ್ಲಿ ನಡೆಯಿತು.

ಉಡುಪಿ ಪ್ರಾದೇಶಿಕ ನಿರ್ದೇಶಕರಾದ ದುಗ್ಗೇ ಗೌಡರವರು ಕಾರ್ಯಕ್ರವನ್ನು ಉದ್ಘಾಟಿಸಿ, ಶ್ರೀ ಕ್ಷೇತ್ರದ ಹಿನ್ನೆಲೆ, ಸೇವೆ ಮತ್ತು ಪರಿವರ್ತನೆಯ ಮಹತ್ವ, ಒಕ್ಕೂಟದ ಅರ್ಥ, ಅಧ್ಯಕ್ಷರ ಹೊಣೆಗಾರಿಕೆ, ಪದಾಧಿಕಾರಿಗಳ ಜವಾಬ್ದಾರಿಗಳು, ಒಕ್ಕೂಟ ಸಭೆಯ ಸಮರ್ಪಕ ನಿರ್ವಹಣೆ, ಸಂಘ-ಯೋಜನೆ-ಬ್ಯಾಂಕಿಗೆ ಇರುವ ಸಂಬಂಧ, ಯೋಜನೆಯ ಕಾರ್ಯ ವೈಖರಿ, ಒಗ್ಗಟ್ಟಿನಿಂದ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಮಾಹಿತಿ ಮಾರ್ಗದರ್ಶನವನ್ನು ನೀಡಿದರು.

ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ 2023-24 ನೇ ಸಾಲಿನ ಆರ್ಥಿಕ ವರ್ಷದ ಸಾಧನಾ ವರದಿಯನ್ನು ಮಂಡಿಸಿದರು.

2023-24 ನೇ ಆರ್ಥಿಕ ವರ್ಷದಲ್ಲಿ ವಿವಿಧ ವಿಷಯಗಳಲ್ಲಿ ಸಾಧನೆ ಮಾಡಿರುವ ತಾಲೂಕಿನ ಒಕ್ಕೂಟಗಳ ಅಧ್ಯಕ್ಷರುಗಳನ್ನು ಗುರುತಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ದ.ಕ ಜಿಲ್ಲೆ 2 ರ ನಿರ್ದೇಶಕರಾದ ಪ್ರವೀಣ್ ಕುಮಾರ್, ತಾಲೂಕಿನ ಎಲ್ಲಾ ಒಕ್ಕೂಟಗಳ ಅಧ್ಯಕ್ಷರು, ಮೇಲ್ವಿಚಾರಕರು ಉಪಸ್ಥಿತರಿದ್ದರು.

ಮೇಲ್ವಿಚಾರಕಿ ಆಶಾ ಪಾರ್ವತಿ ಸ್ವಾಗತಿಸಿ, ಮೇಲ್ವಿಚಾರಕಿ ಸವಿತಾ ವಂದಿಸಿ ಮೇಲ್ವಿಚಾರಕಿ ಸುಗುಣಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.