ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಮಳೆ ಕೊರತೆ ಮತ್ತು ಬರದ ನೈಜ ಪರಿಸ್ಥಿತಿ ಪರಿಶೀಲಿಸಲು ಆಗಮಿಸಿರುವ ಕೇಂದ್ರ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳ ತಂಡದೊಂದಿಗಿನ ಸಭೆ ಜರಗಿತು.

ಮಳೆ ಕೊರತೆಯಿಂದ ಉಂಟಾಗಿರುವ ಬೆಳೆ ನಷ್ಟ, ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಮೇವಿನ ಸಮಸ್ಯೆ ಸೇರಿದಂತೆ ಬರಪೀಡಿತ ತಾಲೂಕುಗಳ ವಸ್ತುಸ್ಥಿತಿಯ ಚಿತ್ರಣವನ್ನು ಕೇಂದ್ರ ಬರ ಅಧ್ಯಯನ ತಂಡಕ್ಕೆ ಸುದೀರ್ಘವಾಗಿ ಕಂದಾಯ ಸಚಿವರಾದ ಡಾ। ಜಿ.ಪರಮೇಶ್ವರ ಅವರು  ವಿವರಿಸಿದರು. ಇದನ್ನೂ ಓದಿ: ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್‌(Smit Machchhar) ಅವರನ್ನು ದುಬೈ ಯುವರಾಜ ಖುದ್ದು ಭೇಟಿ

ಸಭೆಯಲ್ಲಿ ಕೇಂದ್ರ ಬರ ಅಧ್ಯಯನ ತಂಡದ ಮುಖ್ಯಸ್ಥರಾದ ಅಜೀತ್ ಕುಮಾರ್ ಸಾಹು ಹಾಗೂ ತಂಡದ ಸದಸ್ಯರು, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್, ಅಪರ‌ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತಾ, ತುಷಾರ್ ಗಿರಿನಾಥ್, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ ಆಯುಕ್ತೆ ಹೊನ್ನಾಂಬ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.