ನವದೆಹಲಿ: ಪದ್ಮಭೂಷಣ ಸಮಾರಂಭದ ನಂತರ ರಾಷ್ಟ್ರಪತಿಯವರು ನೀಡಿದ ಹೈ ಟೀ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು (Narendra Modi) ಹಿರಿಯ ನಟ ಅನಂತನಾಗ್ (Ananth Nag) ಅವರನ್ನು ಮಾತನಾಡಿಸಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ : ಓವರ್‌ಟೇಕ್ ಮಾಡಲು ಹೋಗಿ ಪರಸ್ಪರ ಬೈಕ್ ಡಿಕ್ಕಿ – ಇಬ್ಬರು ಸಾವು
ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೇ 27 ರಂದು ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕನ್ನಡದ ಹಿರಿಯ ನಟ ಅನಂತ್ ನಾಗ್ (Anant Nag), ರಿಕಿ ಕೇಜ್ (Ricky Kej), ಪ್ರಶಾಂತ್ ಪ್ರಕಾಶ್, ವೆಂಕಪ್ಪ ಅಂಬಾಜಿ ಸುಗಟೇಕರ್ ಸೇರಿದಂತೆ ದೇಶಾದ್ಯಂತ 68 ಸಾಧಕರಿಗೆ ಪದ್ಮ ಪುರಸ್ಕಾರ ಪ್ರದಾನ ಮಾಡಿದ್ದರು. ಇದನ್ನೂ ಓದಿ : World Turtle Day ಮೇ 23 ವಿಶ್ವ ಆಮೆ ದಿನ
ಅನಂತ್ ನಾಗ್ ಕನ್ನಡ ಚಲನಚಿತ್ರ ರಂಗದ ಹಿರಿಯ ನಟರಾಗಿ ಅನಂತ್ ನಾಗ್ ಖ್ಯಾತಿ ಗಳಿಸಿದ್ದಾರೆ. ಕಳೆದ 5 ದಶಕಗಳಲ್ಲಿ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಗೆ ಮತ್ತು ತಮ್ಮ ಬಹುಮುಖ ಪ್ರತಿಭೆಗೆ ಹೆಸರುವಾಸಿಯಾಗಿದ್ದಾರೆ. ಸಿನಿಮಾ ರಂಗದಲ್ಲಿ ಸಾಧನೆಗೆ ಅವರಿಗೆ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ. ಇದನ್ನೂ ಓದಿ : ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ