ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಶ್ರೀಯುತ Mansukh Mandaviya ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ನಮ್ಮ ಹೆಮ್ಮೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.
ಮಂಗಳೂರಿನ ESI ಆಸ್ಪತ್ರೆಯಲ್ಲಿ ಎದುರಾಗುತ್ತಿರುವ ಸಮಸ್ಯೆ -ಸವಾಲುಗಳ ಕುರಿತು ಹಾಗೂ ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಸುಮಾರು 2.5 ಲಕ್ಷ ವಿಮಾದಾರರಿಗೆ ಸೇವೆ ನೀಡುತ್ತಿರುವ ಈ 100 ಹಾಸಿಗೆಗಳ ಆಸ್ಪತ್ರೆಯನ್ನು, ESIC ಸಂಸ್ಥೆಯು ನೇರವಾಗಿ ತನ್ನ ಸುಪರ್ದಿಗೆ ತೆಗೆದುಕೊಳ್ಳುವ ತುರ್ತು ಅಗತ್ಯದ ಬಗ್ಗೆ ಪ್ರಮುಖವಾಗಿ ಈ ವೇಳೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದರು. ಇದನ್ನೂ ಓದಿ : ಅಮೆರಿಕದ ಸಿಯಾಟಲ್ ನಗರದಲ್ಲಿ ನಡೆದಿದ್ದ ಕಾರು ಅಪಘಾತ – ಸಾವಿಗೀಡಾಗಿದ್ದ ಭಾರತದ ವಿದ್ಯಾರ್ಥಿನಿ ಕುಟುಂಬಕ್ಕೆ 260 ಕೋಟಿ ಪರಿಹಾರ

ವಿಶೇಷವಾಗಿ ಆಸ್ಪತ್ರೆಯಲ್ಲಿನ ಸಿಬ್ಬಂದಿ ಕೊರತೆ ಮತ್ತು ಅದರಿಂದ ಸಾರ್ವಜನಿಕರಿಗೆ ಆಗುತ್ತಿರುವ ಸೇವಾ ವ್ಯತ್ಯಯಗಳ ಬಗ್ಗೆ ಸಚಿವರ ಗಮನ ಸೆಳೆದು, ವಿಮಾದಾರರ ಮತ್ತು ಅವರ ಕುಟುಂಬಗಳ ಹಿತದೃಷ್ಟಿಯಿಂದ ಈ ಪ್ರಕ್ರಿಯೆಗೆ ತ್ವರಿತವಾಗಿ ಅನುಮೋದನೆ ನೀಡುವಂತೆ ವಿನಂತಿ ಮಾಡಿದರು..
