ನವದೆಹಲಿಯಲ್ಲಿ ರಕ್ಷಣಾ ಸಚಿವಾಲಯದ ಕಾರ್ಯದರ್ಶಿ ಶ್ರೀ ರಾಜೇಶ್ ಕುಮಾರ್ ಸಿಂಗ್ ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿಯಾದರು.

ಮಂಗಳೂರಿನಲ್ಲಿ ದೇಶದ ಮೊದಲ ಕೋಸ್ಟ್‌ಗಾರ್ಡ್‌ ತರಬೇತಿ ಅಕಾಡಮಿ ಸ್ಥಾಪನೆಯಾಗಲಿದ್ದು, ಈ ಯೋಜನೆಯ ಅನುಷ್ಟಾನದ ಕುರಿತಂತೆ ಚರ್ಚಿಸಲಾಯಿತು. ಈ ಕುರಿತಂತೆ ಅನುಷ್ಟಾನ ಪ್ರಕ್ರಿಯೆ ತ್ವರಿತಗೊಳಿಸಲು ಕಾರ್ಯದರ್ಶಿಯವರಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಕೋರಿದರು.

ಈ ಪ್ರಸ್ತಾವನೆಯು ಭದ್ರತೆ ಕುರಿತ ಸಂಪುಟ ಸಮಿತಿಯ ಅನುಮೋದನೆಗಾಗಿ ಕಾಯುತ್ತಿದ್ದು, ಶೀಘ್ರದಲ್ಲೇ ಇದಕ್ಕೆ ಒಪ್ಪಿಗೆ ಸಿಗುವ ವಿಶ್ವಾಸವಿದೆ ಎಂದು ಸಂಸದರು ತಿಳಿಸಿದರು.