ಹಗರಣಗಳ ಕಾಂಗ್ರೆಸ್ ಸರ್ಕಾರದ ವಿರುದ್ಧದ ಮೈಸೂರು ಚಲೋ ಪಾದಯಾತ್ರೆಯು 4 ನೇ ದಿನವಾದ ಇಂದು ಮದ್ದೂರು ತಾಲೂಕಿನ ನಿಡಘಟ್ಟದಿಂದ ಆರಂಭಿಸಲಾಯಿತು.

ಮೈಸೂರು ಚಲೋ ಪಾದಯಾತ್ರೆಯು 4 ನೇ ದಿನವಾದ ಇಂದು ಮದ್ದೂರು ತಾಲೂಕಿನ ನಿಡಘಟ್ಟದಿಂದ ಚಾಲನೆ
ಮೈಸೂರು ಮುಡಾ ಬಹುಕೋಟಿ ಹಗರಣ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಲೂಟಿ ಹಾಗೂ ಶೋಷಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಹಣವನ್ನು ಅನ್ಯ ಕಾರ್ಯಗಳಿಗೆ ಬಳಸಿಕೊಂಡು ನಾಡಿನ ಜನರಿಗೆ ದ್ರೋಹ ಬಗೆದಿರುವ ಕಾಂಗ್ರೆಸ್ ಸರ್ಕಾರ ತೊಲಗಿಸಲು ಸಹಸ್ರಾರು ಸಂಖ್ಯೆಯ ಭಾಗವಹಿಸಿದ್ದ ಕಾರ್ಯಕರ್ತರ ಘೋಷಣೆ ನಮ್ಮ ಈ ಚಳುವಳಿಗೆ ಶಕ್ತಿ ತುಂಬಿದೆ ಎಂದು ಬಿ.ಜೆ.ಪಿ.ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಶ್ರೀ@drashwathcn, ವಿರೋಧ ಪಕ್ಷ ಉಪನಾಯಕರಾದ ಶ್ರೀ ಅರವಿಂದ್ ಬೆಲ್ಲದ್, ಮಾಜಿ ಸಚಿವರಾದ ಶ್ರೀ ಬಿ ಶ್ರೀರಾಮುಲು, ಶ್ರೀ ಬಿ.ಸಿ.ಪಾಟೀಲ್, ಶ್ರೀ ಕೆ.ಸಿ.ನಾರಾಯಣಗೌಡ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.