-ಶ್ರೀ ವೆಂಕಟರಮಣಸ್ವಾಮಿ ಕಾಲೇಜು, ಬಂಟ್ವಾಳ : ಎನ್.ಎಸ್.ಎಸ್. ಕಾರ್ಯಕ್ರಮಗಳ ಹಾಗೂ ‘ಸ್ವಚ್ಛತಾ ಹಿ ಸೇವಾ’ ಅಭಿಯಾನ ಉದ್ಘಾಟನೆ
ಬಂಟ್ವಾಳ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಪಠ್ಯಗಳಿಗೆ ಸೀಮಿತವಾಗುತ್ತಿದ್ದು, ಸಮಾಜಮುಖಿಯಾಗಲು ಹಾಗೂ ಸದಾ ಕ್ರಿಯಾತ್ಮಕವಾಗಿ ಇರಲು ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದು ಎಸ್.ವಿ.ಎಸ್. ಪದವಿ ಪೂರ್ವ ಕಾಲೇಜು, ವಿದ್ಯಾಗಿರಿಯ ಪ್ರಾಂಶುಪಾಲರಾದ ಸುದರ್ಶನ್ ಬಿ. ನುಡಿದರು. ಇದನ್ನೂ ಓದಿ : ಆಯುಷ್ಮಾನ್ ಭಾರತದ ಏಳನೇ ವಾರ್ಷಿಕೋತ್ಸವವನ್ನು ಆಚರಿಸಿದ ಪ್ರಧಾನಮಂತ್ರಿ
ಅವರು ರಾಷ್ಟ್ರೀಯ ಸೇವಾ ಯೋಜನಾ ಘಟಕ, ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು, ಬಂಟ್ವಾಳ ಅವರು ಆಯೋಜಿಸಿದ್ದ ೨೦೨೫-೨೬ನೇ ಸಾಲಿನ ಎನ್.ಎಸ್.ಎಸ್. ಚಟುವಟಿಕೆಗಳ ಹಾಗೂ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಎಂ.ಡಿ.ಮಂಚಿರವರು ಮಾತನಾಡುತ್ತಾ ರಾಷ್ಟ್ರೀಯ ಸೇವಾ ಯೋಜನೆಯಿಂದ ವಿದ್ಯಾರ್ಥಿಗಳು ವಿಶ್ವವಿದ್ಯಾಲಯ, ರಾಜ್ಯ, ರಾಷ್ಟçಮಟ್ಟದವರೆಗೂ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಲು ಅವಕಾಶಗಳಿವೆ. ಸಭೆ-ಸಮಾರಂಭಗಳನ್ನು ಮುನ್ನಡೆಸುವ ಕೌಶಲ, ಧೈರ್ಯ ಎನ್.ಎಸ್.ಎಸ್.ನಿಂದ ದೊರೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಶ್ರೀ ಶಿವಣ್ಣಪ್ರಭು ಹಾಗೂ ಎನ್.ಎಸ್.ಎಸ್. ಘಟಕ ನಾಯಕರಾದ ಕು.ಕರಿಷ್ಮಾ ಮತ್ತು ಅಮಿತ್ ಪ್ರಭು ಉಪಸ್ಥಿತರಿದ್ದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಕಾಶೀನಾಥ ಶಾಸ್ತ್ರೀ ಸ್ವಾಗತಿಸಿ, ಸಹಾಯಕ ಕಾರ್ಯಕ್ರಮಾಧಿಕಾರಿ ಮಹೇಶ್ ಗೌಡ ವಂದಿಸಿದರು. ಸಹಾಯಕ ಕಾರ್ಯಕ್ರಮಾಧಿಕಾರಿ ಶ್ರೀಮತಿ ಶ್ರೀದೇವಿ ನಿರೂಪಿಸಿ, ಕು.ಆಶಾಲತಾ ಸಂಗಡಿಗರು ಪ್ರಾರ್ಥಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ಕಾಲೇಜು ಉದ್ಯಾನವನ್ನು ಎನ್.ಎಸ್.ಎಸ್. ಸ್ವಯಂಸೇವಕರು ಸ್ವಚ್ಛಗೊಳಿಸಿದರು.