ಬಂಟ್ವಾಳ: ಕೇರಳದ ಅರವೀಪುರದಲ್ಲಿ ಶಿವಲಿಂಗ ಪ್ರತಿಷ್ಠಾಪನೆ ಮಾಡುವ ಮೂಲಕ ಹಿಂದುಳಿದ ವರ್ಗಗಳ ಜನರಿಗೆ ಮೌನ ಕ್ರಾಂತಿಯ ಮೂಲಕ ಧಾರ್ಮಿಕ ಸ್ವಾತಂತ್ರ್ಯ ನೀಡಿದ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳು ಎಂದು ಯುವವಾಹಿನಿ ಬಂಟ್ಟಾಳ ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ತಿಳಿಸಿದರು.
ಅವರು ದಿನಾಂಕ 25-10-.2024 ರಂದು ಬಂಟ್ವಾಳದ ಯಶೋಧರ ಪೂಜಾರಿ ಕಡಂಬಲ್ಕೆ ಇವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ 17 ರಲ್ಲಿ ಗುರುಸಂದೇಶ ನೀಡಿ ಮಾತನಾಡಿದರು.
ಈ ಸಂದರ್ಭದಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ನಾರಾಯಣ ಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕ ಪ್ರಜಿತ್ ಅಮೀನ್ ಏರಮಲೆ, ಪ್ರಥಮ ಉಪಾಧ್ಯಕ್ಷರಾದ ನಾರಾಯಣ ಪಲ್ಲಿಕಂಡ,ನಿರ್ದೇಶಕರಾದ, ಮಧುಸೂದನ್ ಮಧ್ವ & ಮಹೇಶ್ ಬೊಳ್ಳಾಯಿ, ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಕುದನೆ, ಮಾಜಿ ಅಧ್ಯಕ್ಷರಾದ ನಾಗೇಶ್ ಪೊನ್ನೋಡಿ, ಪ್ರೇಮನಾಥ್ ಕರ್ಕೇರ, ಶಿವಾನಂದ ಎಂ, ಅರುಣ್ ಬಿ.ಸಿ ರೋಡ್ ಸದಸ್ಯರಾದ ,ಯತೀಶ್ ಬೊಳ್ಳಾಯಿ, ಪ್ರಶಾಂತ್ ಏರಮಲೆ, ನಾಗೇಶ್ ಏಲಬೆ, ಜಗದೀಶ್ ಕಲ್ಲಡ್ಕ , ಸುನಿತಾ ನಿತಿನ್ ಮಾರ್ನಬೈಲ್, ಹರೀಶ್ ಅಜೆಕಲಾ, ಶೈಲಜಾ ಹರೀಶ್ ಉಪಸ್ಥಿತರಿದ್ದರು.
ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕರಾದ ಪ್ರಜಿತ್ ಅಮೀನ್ ಏರಮಲೆ ಸ್ವಾಗತಿಸಿ, ವಂದಿಸಿದರು.