ಬಂಟ್ವಾಳ ತಾಲೂಕು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ಯೋಗ ದಿನಾಚರಣೆ ಕಾರ್ಯಕ್ರಮ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ರವಿ ಅಂಚನ್ ಅವರ ಅಧ್ಯಕ್ಷತೆಯಲ್ಲಿ ಜರಗಿತು.

ನಿವೃತ್ತ ವಿಜಯ ಬ್ಯಾಂಕ್ ಅಧಿಕಾರಿ ದಿವಾಕರ ಶಂಭೂರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಬಂಟ್ವಾಳ ತಾಲೂಕು ವಿಶೇಷ ಚೇತನ ವಿದ್ಯಾರ್ಥಿಗಳ ನೋಡೆಲ್ ಅಧಿಕಾರಿ ಶ್ರೀಮತಿ ಸುರೇಖಾ ವಿದ್ಯಾರ್ಥಿಗಳಿಗೆ ಯೋಗಾಸನ ಮಾಡುವುದರಿಂದ ಆಗುವ ಪ್ರಯೋಜನ ಹಾಗೂ ಯೋಗ ದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಯೋಗ ಮಂತ್ರ , ಗುರು ಮಂತ್ರ, ಯೋಗ ಪ್ರದರ್ಶನ ಅ, ಉ, ಮ ಕಾರದ ಪಠಣ ಸ್ವಸ್ತಿ ಮಂತ್ರ ಮಕ್ಕಳಿಂದ ಮೂಡಿ ಬಂತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ತಾಯಂದಿರ ಸಮಿತಿ ಉಪಾಧ್ಯಕ್ಷೆ ಪ್ರಿಯ, ಸದಸ್ಯರು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.

ಶಾಲಾ ಮುಖ್ಯ ಶಿಕ್ಷಕಿ ಪ್ರೇಮ ಸ್ವಾಗತಿಸಿ, ಶಿಕ್ಷಕಿ ಪೂಜಾ ವಂದಿಸಿ, ಶಿಕ್ಷಕಿ ಶೋಭ ಕಾರ್ಯಕ್ರಮ ನಿರೂಪಿಸಿದರು.