ಪಡುಮಲೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪಡುಮಲೆ ಇದರ ವತಿಯಿಂದ ಮಹಿಳೆಯರ ಹಾಗೂ ಪುರುಷರ ಸಾರ್ವಜನಿಕ ಪ್ರಥಮ ವರ್ಷದ ಕೆಸರ್‌ಡ್ ಒಂಜಿ ದಿನ ವಿವಿಧ ಆಟೋಟ ಸ್ಪರ್ಧೆಗಳ ಕ್ರೀಡಾಕೂಟವು ಆ.18ರಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ವಠಾರದ ಡಾ| ರಮಾ ಕೆ.ವಿ.ಭಂಡಾರಿ ವೇದಿಕೆಯ ಮುಂಭಾಗದ ಗದ್ದೆಯಲ್ಲಿ ನಡೆಯಲಿದೆ.
ಇದರ ಆಮಂತ್ರಣ ಪತ್ರಿಕೆಯನ್ನು ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಮುಂಭಾಗದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.