ಇಸ್ಲಾಮಾಬಾದ್: ಭಾರತೀಯ (India) ವಿಮಾನಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶ ನಿಷೇಧವನ್ನು ಮತ್ತೊಂದು ತಿಂಗಳು ವಿಸ್ತರಿಸಿದೆ.
ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ವಿಮಾನಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶ ನಿಷೇಧವನ್ನು ಆ.24ರ ವರೆಗೆ ವಿಸ್ತರಿಸಿದೆ. ಆ ದಿನ ಬೆಳಿಗ್ಗೆ 5:19ರ ವರೆಗೆ ನಿಷೇಧ ಜಾರಿಯಲ್ಲಿರಲಿದೆ ಎಂದು ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ (ಪಿಎಎ) ತಿಳಿಸಿದೆ. ಇದನ್ನೂ ಓದಿ : Uttar Pradesh | ಮಥುರಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ – 6 ಜನ ದುರ್ಮರಣ
ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಯಾವುದೇ ವಿಮಾನಗಳು, ಭಾರತೀಯ ಒಡೆತನದ ಅಥವಾ ಗುತ್ತಿಗೆ ಪಡೆದ ಮಿಲಿಟರಿ ಮತ್ತು ನಾಗರಿಕ ವಿಮಾನಗಳು ಪಾಕಿಸ್ತಾನಿ ವಾಯುಪ್ರದೇಶವನ್ನು ಬಳಸಲು ಅನುಮತಿ ನೀಡುವುದಿಲ್ಲ ಎಂದು ಪಿಎಎ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.
ಏಪ್ರಿಲ್ 22 ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Attack) ನಂತರ ಭಾರತ ಸರ್ಕಾರವು ಪಾಕಿಸ್ತಾನದ ವಿರುದ್ಧ ಅನೇಕ ಕ್ರಮಗಳನ್ನುಕೈಗೊಂಡಿತ್ತು. ಅಲ್ಲದೇ ಎಲ್ಲಾ ಪಾಕಿಸ್ತಾನಿ ವಿಮಾನಗಳಿಗೆ ಭಾರತೀಯ ವಾಯು ಮಾರ್ಗ ಬಂದ್ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿತ್ತು.