ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಇಂದು ಸಂಭವಿಸಿದ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.  ಪ್ರಧಾನಮಂತ್ರಿ ರಾಷ್ಡ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ಅವರು ಪರಿಹಾರ ಘೋಷಿಸಿದ್ದಾರೆ.  ಮೃತರ ವಾರಸುದಾರರಿಗೆ ತಲಾ ರೂ. 2 ಲಕ್ಷ  ಹಾಗೂ ಗಾಯಗೊಂಡವರಿಗೆ ತಲಾ ರೂ. 50,000 ಪರಿಹಾರ ಪ್ರಕಟಿಸಿದ್ದಾರೆ.

ಪ್ರಧಾನಮಂತ್ರಿಗಳ ಕಾರ್ಯಾಲಯದ ಎಕ್ಸ್ ಪೋಸ್ಟ್ ಹೀಗಿದೆ:

“ಮಧ್ಯಪ್ರದೇಶದ ಮಂದಸೌರ್‌ನಲ್ಲಿ ಸಂಭವಿಸಿದ ಅಪಘಾತದಲ್ಲಿ ಪ್ರಾಣಹಾನಿಯಿಂದ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಗುಣಮುಖರಾಗಲಿ.

ಪ್ರಧಾನಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (PMNRF) ನಿಂದ ಮೃತರ ವಾರಸುದಾರರಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ ರೂ.  50,000 ಪರಿಹಾರ ನೀಡಲಾಗುವುದು : ಪ್ರಧಾನಮಂತ್ರಿ @narendramodi”