ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಶ್ರೀ ನರೇಂದ್ರ ಮೋದಿ ಹಾರೈಸಿದ್ದಾರೆ. ಇದನ್ನೂ ಓದಿ : ತೆಲಂಗಾಣದಲ್ಲಿ ಬಸ್ ಅಪಘಾತ – ಬಸ್ಸಿನೊಳಕ್ಕೆ ಬಿದ್ದ ಜಲ್ಲಿ ರಾಶಿಯಲ್ಲಿ ಸಿಲುಕಿ 10ಕ್ಕೂ ಅಧಿಕ ಮಂದಿ ಸಾವು
ಪ್ರಧಾನಮಂತ್ರಿ ಅವರು ಪಿ.ಎಂ.ಎನ್.ಆರ್.ಎಫ್.ನಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ.
ಪ್ರಧಾನಮಂತ್ರಿಯವರ ಕಚೇರಿ ಈ ಕುರಿತು ಎಕ್ಸ್ ನಲ್ಲಿ ಪೊಸ್ಟ್ ಮಾಡಿದೆ:
“ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಉಂಟಾದ ಜೀವಹಾನಿ ತೀವ್ರ ದುಃಖ ತಂದಿದೆ. ಈ ಸಂಕಷ್ಟದ ಸಮಯದಲ್ಲಿ ಸಂತ್ರಸ್ತರು ಮತ್ತು ಅವರ ಕುಟುಂಬಗಳೊಂದಿಗೆ ನನ್ನ ಸಂವೇದನೆ ಇದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.
ಮೃತರ ಕುಟುಂಬಗಳಿಗೆ ಪಿ.ಎಂ.ಎನ್.ಆರ್.ಎಫ್.ನಿಂದ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು. ಗಾಯಗೊಂಡವರಿಗೆ 50,000 ರೂ.ಗಳನ್ನು ನೀಡಲಾಗುವುದು: ಪ್ರಧಾನಮಂತ್ರಿ @narendramodi.”
