ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಅವರಿಗೆ  ಅಭಿನಂದನೆ ಸಲ್ಲಿಸಿದ್ದಾರೆ.

ಶ್ರೀ ಸಾಮ್ರಾಟ್ ಚೌಧರಿ ಅವರ ಶಕ್ತಿ, ಸಾರ್ವಜನಿಕ ಸೇವೆಗೆ ಬದ್ಧತೆ ಮತ್ತು ತಳಮಟ್ಟದ ಅನುಭವವು ರಾಜ್ಯಕ್ಕೆ ಅತ್ಯಂತ ಉಪಕಾರಿಯಾಗಲಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಚೌಧರಿ ಅವರ ಸಮರ್ಥ ನಾಯಕತ್ವದಲ್ಲಿ ಬಿಹಾರವು ಜನರ ಆಕಾಂಕ್ಷೆಗಳನ್ನು ಈಡೇರಿಸುವುದರೊಂದಿಗೆ ಸರ್ವತೋಮುಖ ಅಭಿವೃದ್ಧಿಯಲ್ಲಿ ಹೊಸ ಎತ್ತರವನ್ನು ತಲುಪುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.  ಇದನ್ನೂ ಓದಿ : ಮಂಡ್ಯ ಜಿಲ್ಲೆಯ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ – ಪ್ರಧಾನಮಂತ್ರಿ

ಅಲ್ಲದೆ, ಪ್ರಧಾನಮಂತ್ರಿ  ಅವರು ಬಿಹಾರದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ವಿಜಯ್ ಕುಮಾರ್ ಚೌಧರಿ ಮತ್ತು ಶ್ರೀ ಬಿಜೇಂದ್ರ ಪ್ರಸಾದ್ ಯಾದವ್ ಗೆ ಅಭಿನಂದನೆ ಸಲ್ಲಿಸಿದರು.

ಸಾರ್ವಜನಿಕ ಕಲ್ಯಾಣಕ್ಕಾಗಿ ಅವರ ತಳಮಟ್ಟದ ಅನುಭವ ಮತ್ತು ಬದ್ಧತೆಯು ಬಿಹಾರದ ಅಭಿವೃದ್ಧಿಗೆ ಹೊಸ ದಿಕ್ಕು ಮತ್ತು ವೇಗವನ್ನು ನೀಡುತ್ತದೆ ಮತ್ತು ರಾಜ್ಯವು ಉತ್ತಮ ಆಡಳಿತ, ಪಾರದರ್ಶಕತೆ ಮತ್ತು ಸಾರ್ವಜನಿಕ ಕಲ್ಯಾಣದಲ್ಲಿ ಹೊಸ ಮಾನದಂಡಗಳನ್ನು ಸ್ಥಾಪಿಸಲಿದೆ ಎಂದು ಪ್ರಧಾನಮಂತ್ರಿ ಅವರು ವಿಶ್ವಾಸ ವ್ಯಕ್ತಪಡಿಸಿದರು.