ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಲೋಕ ಕಲ್ಯಾಣ ಮಾರ್ಗದ ನಂಬರ್‌ 7ರಲ್ಲಿ ಐಸಿಸಿ ಮಹಿಳಾ ವಿಶ್ವಕಪ್‌ 2025 ಚಾಂಪಿಯನ್ ಗಳೊಂದಿಗೆ ಸಂವಾದ ನಡೆಸಿದರು. 2025ರ ನವೆಂಬರ್ 2ರಂದು ರಾತ್ರಿ ನಡೆದ ಫೈನಲ್ಸ್‌ ನಲ್ಲಿ ಭಾರತ ತಂಡ ದಕ್ಷಿಣಾ ಆಫ್ರಿಕಾ ವಿರುದ್ಧ ಗೆಲುವು ಸಾಧಿಸಿತು. ದೇವ ದೀಪಾವಳಿ ಮತ್ತು ಗುರುಪುರಬ್ ಎರಡನ್ನೂ ಗುರುತಿಸುವ ಈ ದಿನವು ಬಹಳ ಮಹತ್ವದ ದಿನವಾಗಿದೆ ಎಂದು ಪ್ರಧಾನಮಂತ್ರಿ ಹೇಳಿದರು ಮತ್ತು ಹಾಜರಿದ್ದ ಎಲ್ಲಾ ಆಟಗಾರ್ತಿಯರಿಗೂ ಶುಭ ಕೋರಿದರು. ಇದನ್ನು ಓದಿ ; ರಷ್ಯಾದಲ್ಲಿ ಕಾಣೆಯಾಗಿದ್ದ ಭಾರತೀಯ ಮೂಲದ ವೈದ್ಯ ವಿದ್ಯಾರ್ಥಿಯ ಶವ ಡ್ಯಾಮ್‌ನಲ್ಲಿ ಪತ್ತೆ

ತಂಡ ಆಟಗಾರ್ತಿಯರೊಂದಿಗೆ ಸಂವಾದ ನಡೆಸಲು ಅವಕಾಶ ಸಿಕ್ಕಿದ್ದಕ್ಕೆ ಪ್ರಧಾನಮಂತ್ರಿಶ್ರೀ ನರೇಂದ್ರ ಮೋದಿ ಸಂತೋಷ ವ್ಯಕ್ತಪಡಿಸಿದರು, ಇದೇ ಕೆಲವು ಆಟಗಾರರನ್ನು ಹಿಂದೆ ಭೇಟಿ ಮಾಡಿದ್ದರೂ ಸಹ ಹಲವು ಆಟಗಾರ್ತಿಯರನ್ನು ಮೊದಲ ಬಾರಿಗೆ ಭೇಟಿಯಾಗುತ್ತಿದ್ದಾರೆನಿಸಿತು ಎಂದರು. ಆಟಗಾರ್ತಿಯರನ್ನು ಭೇಟಿಯಾಗಲು ನಾನು ಸದಾ ಎದುರು ನೋಡುತ್ತಿದ್ದೇನೆ ಮತ್ತು ಅವರಿಗೆ ಉತ್ತಮ ಆರೋಗ್ಯವನ್ನು ಬಯಸುತ್ತೇನೆ ಎಂದು ಹೇಳಿದರು.

ಪ್ರಧಾನಮಂತ್ರಿ ಅವರ ಮಾತುಗಳನ್ನು ಖಂಡಿತವಾಗಿಯೂ ಎಲ್ಲರೂ ನೆನಪಿಸಿಕೊಳ್ಳುತ್ತಾರೆ ಮತ್ತು ಅವಕಾಶ ಸಿಕ್ಕಾಗಲೆಲ್ಲಾ ಸಂದೇಶವನ್ನು ರವಾನಿಸುತ್ತಾರೆ ಎಂದು ಸ್ಮೃತಿ ಮಂಧಾನ ಪ್ರತಿಕ್ರಿಯಿಸಿದರು. ಇಡೀ ತಂಡವು ಅಂತಹ ಸಂದೇಶಗಳನ್ನು ಬೆಂಬಲಿಸಲು ಸದಾ ಸಿದ್ಧವಾಗಿದೆ ಮತ್ತು ಕರೆದಾಗಲೆಲ್ಲಾ ಬರುತ್ತೇವೆ ಎಂದು ಅವರು ಹೇಳಿದರು.

ನಾವೆಲ್ಲರೂ ಒಗ್ಗೂಡಿ ದೇಶವನ್ನು ಮುಂದಕ್ಕೆ ಕೊಂಡೊಯ್ಯೋಣ ಎಂದು ಹೇಳುವ ಮೂಲಕ ಪ್ರಧಾನಮಂತ್ರಿ ತಮ್ಮ ಮಾತು ಮುಗಿಸಿದರು ಮತ್ತು ಎಲ್ಲರಿಗೂ ಮತ್ತೊಮ್ಮೆ ತಮ್ಮ ಶುಭಾಶಯಗಳನ್ನು ತಿಳಿಸಿದರು.