ಪ್ರ ಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಕ್ರೇನ್ ಅಧ್ಯಕ್ಷರಾದ ಮಾನ್ಯ ಶ್ರೀ ವೊಲೊಡಿಮಿರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.
ಉಕ್ರೇನ್‌ಗೆ ಸಂಬಂಧಿಸಿದ ಇತ್ತೀಚಿನ ಬೆಳವಣಿಗೆಗಳ ಕುರಿತು ಅಧ್ಯಕ್ಷ ಝೆಲೆನ್ಸ್ಕಿ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಇದನ್ನೂ ಓದಿ : ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸಲಿರುವ ವಂದೇ ಭಾರತ್ ರೈಲಿಗೆ ಚಾಲನೆ
ಸಂಘರ್ಷದ ಶಾಂತಿಯುತ ಇತ್ಯರ್ಥಕ್ಕೆ ಭಾರತದ ದೃಢ ಮತ್ತು ಸ್ಥಿರವಾದ ನಿಲುವು ಹಾಗೂ ಶೀಘ್ರವಾಗಿ ಶಾಂತಿ ಪುನಃಸ್ಥಾಪಿಸುವ ಗುರಿಯನ್ನು ಹೊಂದಿರುವ ಪ್ರಯತ್ನಗಳಿಗೆ ಭಾರತದ ಬೆಂಬಲವಿರಲಿದೆ ಎಂದು ಒತ್ತಿ ಹೇಳುತ್ತಾ ಪ್ರಧಾನಮಂತ್ರಿಯವರು ಅಧ್ಯಕ್ಷ ಝೆಲೆನ್ಸ್ಕಿ ಅವರಿಗೆ ಧನ್ಯವಾದ ಅರ್ಪಿಸಿದರು. ಈ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುವ ಭಾರತದ ಬದ್ಧತೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು.
ಉಭಯ ನಾಯಕರು ಭಾರತ-ಉಕ್ರೇನ್ ದ್ವಿಪಕ್ಷೀಯ ಪಾಲುದಾರಿಕೆಯಲ್ಲಿನ ಪ್ರಗತಿ ಪರಾಮರ್ಶೆ ನಡೆಸಿದರು ಮತ್ತು ಪರಸ್ಪರ ಹಿತಾಸಕ್ತಿಯ ಕ್ಷೇತ್ರಗಳಲ್ಲಿ ಸಹಕಾರವನ್ನು ಇನ್ನಷ್ಟು ವೃದ್ಧಿಸುವ ಮಾರ್ಗಗಳ ಬಗ್ಗೆ ಚರ್ಚಿಸಿದರು.
ಪರಸ್ಪರ ಸಂಪರ್ಕದಲ್ಲಿರಲು ಎರಡೂ ದೇಶಗಳ ನಾಯಕರು ಸಮ್ಮತಿಸಿದರು. ಇದನ್ನೂ ಓದಿ : ಸೇವಾಂಜಲಿ ಸೇವಾ ಕಾರ್ಯದ ಮೂಲಕ ಜನರಿಗೆ ಸ್ಪಂದನೆಯನ್ನು ನೀಡುತ್ತಿದೆ – ದಿನೇಶ್ ಡಿ.