ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ  ಇಂದು ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರವಾಗಿ ಖಂಡಿಸಿದ್ದಾರೆ. “ಈ ಹೇಯ ಕೃತ್ಯದ ಹಿಂದಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅವರನ್ನು ಸುಮ್ಮನೆ ಬಿಡಲಾಗುವುದಿಲ್ಲ! ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದ್ದು, ಅದು ಇನ್ನಷ್ಟು ಬಲಗೊಳ್ಳುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

ಪ್ರಧಾನಮಂತ್ರಿಗಳ ಎಕ್ಸ್‌ ಪೋಸ್ಟ್‌ ಹೀಗಿದೆ:

“ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ.

ಈ ಹೇಯ ಕೃತ್ಯ ಎಸಗಿದವರನ್ನು ನ್ಯಾಯದ ಕಟಕಟೆಗೆ ತರಲಾಗುವುದು…ಅವರನ್ನು ಸುಮ್ಮನೆ ಬಿಡಲಾಗುವುದಿಲ್ಲ! ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲವಾಗಿದೆ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ.”