ವಿಧಾನಸೌಧದಲ್ಲಿ ಸೆ.19ರಂದು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಡಾ| ಜಿ.ಪರಮೇಶ್ವರ್ ಅವರು ಪೊಲೀಸ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಡಾ. ಎಂ.ಎ.ಸಲೀಂ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಡಿಜಿ ಕೆ.ರಾಮಚಂದ್ರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಾಂತ್ ಕುಮಾರ್ ಸಿಂಗ್, ಎಡಿಜಿಪಿ ಆರ್.ಹಿತೇಂದ್ರ, ಉಮೇಶ್ ಕುಮಾರ್, ಹರಿಶೇಖರನ್, ಸೌಮೇಂದು ಮುಖರ್ಜಿ, ಗೃಹ ಇಲಾಖೆಯ ಕಾರ್ಯದರ್ಶಿ ಕೆ.ವಿ.ಶರತ್ ಚಂದ್ರ ಹಾಗೂ ಎಲ್ಲ ವಿಭಾಗದ ಡಿಸಿಪಿಗಳು ಸಭೆಯಲ್ಲಿ ಹಾಜರಿದ್ದರು.