ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿಗೆ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿದೆ.

ಸುಮಾರು 343.74 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ರಸ್ತೆಯು ರಸ್ತೆಯು ಜಿಲ್ಲೆಗೆ ಉತ್ತಮ ರಸ್ತೆ ಸಂಪರ್ಕವನ್ನು ಒದಗಿಸಿ ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಅಗತ್ಯ ನೆರವಾಗಲಿದೆ.

ನಮ್ಮ ದಕ್ಷಿಣ ಕನ್ನಡ ಜಿಲ್ಲೆಗೆ ಈ ಮಹತ್ವದ ಹೆದ್ದಾರಿ ಯೋಜನೆಯನ್ನು ನೀಡಿರುವ ನೆಚ್ಚಿನ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ಶ್ರೀ Nitin Gadkari ಅವರಿಗೆ ಸಂಸದ ನಳಿನ್‌ ಕುಮಾರ್‌ ಕಟೀಲು ಅಭಿನಂದನೆ ವ್ಯಕ್ತಪಡಿಸಿದ್ದಾರೆ.