ಬಂಟ್ವಾಳ : ತರಗತಿಯ ಒಳಗೆ ಕಲಿಯುವ ಪಠ್ಯ ವಿಷಯಗಳು ಕೇವಲ ಸಿದ್ದಾಂತವನ್ನುಷ್ಟೇ ಕಲಿಸುತ್ತದೆ, ಆದರೆ ತರಗತಿ ಕೋಣೆಗಳ ಹೊರಗೆ ನಿತ್ಯ ಜೀವನದಲ್ಲಿ ಅವುಗಳನ್ನು ಅಳವಡಿಸಿಕೊಳ್ಳುವ ಪ್ರಾಯೋಗಿಕ ಜ್ಞಾನವು ಮುಖ್ಯವಾಗಿದೆ ಈ ರೀತಿಯಾಗಿ ಅಗ್ನಿ ನಂದಕವನ್ನು ಬಳಸುವ ವಿಚಾರ ಪ್ರತಿಯೊಬ್ಬನಿಗೂ ತಿಳಿದಿರಬೇಕು ನಿತ್ಯ ಜೀವನದಲ್ಲಿ ಅದರ ಉಪಯೋಗವನ್ನು ಮಾಡುವ ವಿಧಾನವು ತಿಳಿದಾಗ ಅಪಾಯದ ಸಂದರ್ಭದಲ್ಲಿ ಯಾವುದೇ ಅಂಜಿಕೆ ಇಲ್ಲದೆ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಮಜಿ ಶಾಲೆಯ ದೈಹಿಕ ಶಿಕ್ಷಕ ಇಂದುಶೇಖರ್ ಹೇಳಿದರು. ಇದನ್ನೂ ಓದಿ : ಬಿ. ಸಿ. ರೋಡ್ ನಲ್ಲಿ ತೆಂಗು ಬೆಳೆ ಮಾಹಿತಿ ಸಂವಾದ
ಅವರು ವೀರಕಂಬ ಮಜಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ, ಅಡುಗೆ ಸಿಬ್ಬಂದಿಗಳಿಗೆ, ಅಗ್ನಿನಂದಕದ ಪ್ರಾಯೋಗಿಕ ಚಟುವಟಿಕೆಯನ್ನು ನಡೆಸುವ ಮೂಲಕ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಲೆಗೆ ಉಚಿತ ತರಕಾರಿ ಪೂರೈಸುತ್ತಿರುವ ಮೆಲ್ಕಾರ್ ಚಂದ್ರಿಕಾ ವೆಜಿಟೇಬಲ್ ಮಾಲಕ ಮೊಹಮ್ಮದ್ ಶರೀಫ್, ಶಾಲಾ ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ, ಶಿಕ್ಷಕ ವೃಂದ, ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ : ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು