ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಇದರ ಚುನಾವಣೆಯ ಪೂರ್ವಭಾವಿ ಸಭೆಯು ಅ.30ರಂದು ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಮಂಡಲದ ಅಧ್ಯಕ್ಷರಾದ ಚೆನ್ನಪ್ಪ ಆರ್. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಒಂದಾಗಿ ಕೆಲಸ ಮಾಡುವ ಮೂಲಕ ಮತ್ತೊಮ್ಮೆ ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ನಮ್ಮ ಆಡಳಿತಕ್ಕೆ ಒಳಪಡಬೇಕೆಂದು ಎಲ್ಲರಲ್ಲಿ ಮನವಿ ಮಾಡಿದರು.
ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿಯವರು ರೈತರ ಸೇವಾ ಸಹಕಾರಿ ಸಂಘದಿಂದ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಹಾಗೂ ಬೂತ್ ಅಧ್ಯಕ್ಷರು ಇತರ ಪ್ರಮುಖರುಗಳಿಂದ ಚುನಾವಣಾ ಪ್ರಭಾರಿಗಳಾಗಿ ಬಂದಿದ್ದ ಪದ್ಮನಾಭ ಬಂಟ್ವಾಳ ರವರು ಚುನಾವಣೆಯನ್ನು ಎದುರಿಸುವ ಬಗ್ಗೆ ಮಾಹಿತಿ ನೀಡಿದರು.
ರೈತರ ಸೇವಾ ಸಹಕಾರಿ ಸಂಘಕ್ಕೆ ಒಳಪಡುವ ಐದು ಗ್ರಾಮಗಳ ಬೂತ್ ಅಧ್ಯಕ್ಷರುಗಳು ಹಾಗೂ ಇತರ ಪ್ರಮುಖರುಗಳು ಉಪಸ್ಥಿತರಿದ್ದರು. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ಕಾರ್ಯದರ್ಶಿಗಳಾದ ದಿನೇಶ್ ಅಮ್ಮ್ಟೂರು, ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯವರಾದ ಲಕಿತಾ ಆರ್ ಶೆಟ್ಟಿ, ಬಿಜೆಪಿ ಸಹಕಾರಿ ಪ್ರಕೋಶದ ಸಂಚಾಲಕರಾದ ಜಯರಾಮ್ ರೈ, ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುಧಾಕರ್ ಶೆಟ್ಟಿ, ಬೋಳಂತೂರು, ಪಂಚಾಯತ್ ಅಧ್ಯಕ್ಷರಾದ ಪ್ರೇಮ ಉಪಾಧ್ಯಕ್ಷರಾದ ಜಯಂತಗೌಡ, ವಿಶ್ವನಾಥ ಕ್ವಾಲಿಟಿ, ನವೀನ್ ಗಟ್ಟಿ ನೆಟ್ಲ ಐದು ಗ್ರಾಮಗಳ ಎಲ್ಲಾ ಬೂತಿನ ಅಧ್ಯಕ್ಷರು ಹಾಗೂ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಮೋನಪ್ಪ ದೇವಸ್ಯ ಸ್ವಾಗತಿಸಿ, ದಿನೇಶ್ ಅಮ್ಟೂರು ವಂದಿಸಿದರು.