ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವಭಾವಿಯಾಗಿ ಬಿಜೆಪಿ ಮಹಾಶಕ್ತಿಕೇಂದ್ರದ ಪ್ರಮುಖರ ಸಭೆ ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ನೇತೃತ್ವದಲ್ಲಿ ನಡೆಯಿತು.
ವೇದಿಕೆಯಲ್ಲಿ ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಪ್ರಭಾರಿಗಳಾದ ಪೂಜಾ ಪೈ, ಪ್ರಮುಖರಾದ ವಿಕಾಸ್ ಪುತ್ತೂರು, ರವೀಶ್ ಶೆಟ್ಟಿ, ಡೊಂಬಯ ಅರಳ, ದಿನೇಶ್ ಅಮ್ಟೂರು, ರಾಮದಾಸ್ ಬಂಟ್ವಾಳ, ಸುಲೋಚನ ಜಿ.ಕೆ ಭಟ್, ಮೋನಪ್ಪ ದೇವಸ್ಯ, ಸುರೇಶ್ ಕೋಟ್ಯಾನ್ ಹಾಗೂ ಪ್ರಮುಖ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.