ಎರಡನೇ ಬಾರಿಗೆ ಲೋಕಸಭಾಧ್ಯಕ್ಷರಾಗಿ ಚುನಾಯಿತರಾಗಿರುವ ಶ್ರೀ. ಓಂ ಬಿರ್ಲಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ನೂತನವಾಗಿ ಚುನಾಯಿತರಾಗಿರುವ ಸ್ಪೀಕರ್ ಅವರ ಒಳನೋಟಗಳು ಮತ್ತು ಅನುಭವದಿಂದ ಲೋಕಸಭೆಗೆ ಅನುಕೂಲವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

“ಎರಡನೇ ಬಾರಿಗೆ ಲೋಕಸಭಾ ಸ್ಪೀಕರ್ ಆಗಿ ಚುನಾಯಿತರಾಗಿರುವ ಶ್ರೀ. ಓಂ ಬಿರ್ಲಾ ಅವರಿಗೆ ಅಭಿನಂದನೆಗಳನ್ನು ತಿಳಿಸಲು ಬಯಸುತ್ತೇನೆ. ಅವರ ಒಳನೋಟ ಮತ್ತು ಅನುಭವಗಳಿಂದ ಲೋಕಸಭೆಗೆ ಹೆಚ್ಚಿನ ಅನುಕೂಲವಾಗಲಿದೆ‌. ಅವರ ಮುಂದಿನ ಅವಧಿಗೆ ನನ್ನ ಶುಭಹಾರೈಕೆಗಳು.”