ರಾಷ್ಟ್ರ ರಾಜಧಾನಿಯಲ್ಲಿ ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರದ್ಧಾಂಜಲಿ ಸಲ್ಲಿಸಿದರು.

“ನಮ್ಮ ದೇಶವನ್ನು ನಿಸ್ವಾರ್ಥವಾಗಿ ರಕ್ಷಿಸಿದವರನ್ನು ನಾವು ಸ್ಮರಿಸುತ್ತೇವೆ ಮತ್ತು ಗೌರವಿಸುತ್ತೇವೆ” ಎಂದು ಪ್ರಧಾನಮಂತ್ರಿಯವರು ಹೇಳಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ರೀತಿ ಸಂದೇಶ ಕಳುಹಿಸಿದ್ದಾರೆ:

“ರಾಷ್ಟ್ರೀಯ ಸಮರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದೇವೆ. ನಿಸ್ವಾರ್ಥವಾಗಿ ನಮ್ಮ ದೇಶವನ್ನು ರಕ್ಷಿಸಿದವರನ್ನು ನಾವು ಸ್ಮರಿಸುತ್ತೇವೆ ಮತ್ತು ಗೌರವಿಸುತ್ತೇವೆ. ಅವರ ಧೈರ್ಯ ಮತ್ತು ತ್ಯಾಗವನ್ನು ಎಂದಿಗೂ ಮರೆಯಲಾಗುವುದಿಲ್ಲ. ನಾವು ಅವರಿಗೆ ಗೌರವ ಮತ್ತು ಕೃತಜ್ಞತೆಯಿಂದ ನಮಸ್ಕರಿಸುತ್ತೇವೆ, ಅವರ ಆದರ್ಶಗಳನ್ನು ಎತ್ತಿಹಿಡಿಯುವ ಪ್ರತಿಜ್ಞೆ ಮಾಡುತ್ತೇವೆ.”