ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂಯುಕ್ತ ಆರಬ್ ಎಮಿರೇಟ್ಸ್ (ಯುನೈಟೆಡ್ ಅರಬ್ ಎಮಿರೇಟ್ಸ್) ಅಧ್ಯಕ್ಷರಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಿದರು. ಇದನ್ನೂ ಓದಿ : ಇಸ್ರೇಲ್ ಪ್ರಧಾನಮಂತ್ರಿ ಅವರೊಂದಿಗೆ ಸಮಾಲೋಚನೆ ನಡೆಸಿದ ಪ್ರಧಾನಮಂತ್ರಿ

ಯುಎಇ ಮೇಲಿನ ದಾಳಿಯನ್ನು ತೀವ್ರವಾಗಿ ಖಂಡಿಸಿದ ಪ್ರಧಾನಮಂತ್ರಿ ಆ ದಾಳಿಯಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದರು. ಈ ಸಂಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಜತೆಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ ಎಂದು ಅವರು ಭರವಸೆ ನೀಡಿದರು.

ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯವನ್ನು ನೋಡಿಕೊಂಡಿದ್ದಕ್ಕಾಗಿ ಯುಎಇ ಅಧ್ಯಕ್ಷರಿಗೆ ಪ್ರಧಾನಮಂತ್ರಿ ಧನ್ಯವಾದಗಳನ್ನು ಸಲ್ಲಿಸಿದರು. ಭಾರತವು ಆ ಪ್ರದೇಶದಲ್ಲಿ ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತದೆ ಎಂದು ಅವರು ಬಲವಾಗಿ ಪ್ರತಿಪಾದಿಸಿದರು.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾನ X ಪೋಸ್ಟ್ ನಲ್ಲಿ ಹೀಗೆ ಹಂಚಿಕೊಂಡಿದ್ದಾರೆ.

“ಯುಎಇ ಅಧ್ಯಕ್ಷರಾದ ನನ್ನ ಸಹೋದರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ಸಮಾಲೋಚನೆ ನಡೆಸಿದೆ. ಯುಎಇ ಮೇಲಿನ ದಾಳಿಗಳನ್ನು ತೀವ್ರವಾಗಿ ಖಂಡಿಸಲಾಗುವುದು ಮತ್ತು ಈ ದಾಳಿಗಳಲ್ಲಿ ಸಂಭವಿಸಿದ ಜೀವಹಾನಿಗೆ  ಸಂತಾಪಗಳು. ಈ ಸಂಕಷ್ಟದ ಸಮಯದಲ್ಲಿ ಭಾರತ ಯುಎಇಯೊಂದಿಗೆ ಜತೆಗೆ ಒಗ್ಗಟ್ಟಿನಿಂದ ನಿಲ್ಲುತ್ತದೆ.

ಯುಎಇಯಲ್ಲಿ ವಾಸಿಸುವ ಭಾರತೀಯ ಸಮುದಾಯವನ್ನು ಸುರಕ್ಷಿತವಾಗಿ ನೋಡಿಕೊಂಡಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿಸುತ್ತೇನೆ. ನಾವು ಉದ್ವಿಗ್ನತೆ ನಿವಾರಣೆ, ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಬೆಂಬಲಿಸುತ್ತೇವೆ.’’