ನವದೆಹಲಿಯ ಬಾಬಾ ಖರಕ್ ಸಿಂಗ್ ಮಾರ್ಗದಲ್ಲಿ ಸಂಸತ್ ಸದಸ್ಯರಿಗಾಗಿ ಹೊಸದಾಗಿ ನಿರ್ಮಿಸಲಾದ 184 ಟೈಪ್-VII ಬಹುಮಹಡಿ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಆ.11ರಂದು  ಉದ್ಘಾಟಿಸಿದರು.

ನವದೆಹಲಿಯಲ್ಲಿ ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ಕರ್ತವ್ಯ ಪಥದಲ್ಲಿರುವ ಕರ್ತವ್ಯ ಭವನ ಎಂದು ಕರೆಯಲಾಗುವ ಸಾಮಾನ್ಯ ಕೇಂದ್ರ ಸಚಿವಾಲಯವನ್ನು ಇತ್ತೀಚೆಗೆ ಉದ್ಘಾಟಿಸಿದೆ ಮತ್ತು ಇಂದು ಸಂಸದರಿಗಾಗಿ ಹೊಸದಾಗಿ ನಿರ್ಮಿಸಲಾದ ವಸತಿ ಸಮುಚ್ಚಯವನ್ನು ಉದ್ಘಾಟಿಸುವ ಅವಕಾಶ ದೊರೆತಿದೆ ಎಂದು ಹೇಳಿದರು.

ಭಾರತದ ನಾಲ್ಕು ಮಹಾ ನದಿಗಳಾದ ಕೃಷ್ಣಾ, ಗೋದಾವರಿ, ಕೋಸಿ ಮತ್ತು ಹೂಗ್ಲಿ ಹೆಸರುಗಳನ್ನು ಸಮುಚ್ಚಯದ ನಾಲ್ಕು ಗೋಪುರಗಳಿಗೆ ಇಡಲಾಗಿದೆ. ಲಕ್ಷಾಂತರ ಜನರಿಗೆ ಬದುಕು ನೀಡುವ ಈ ನದಿಗಳು ಈಗ ಸಾರ್ವಜನಿಕ ಪ್ರತಿನಿಧಿಗಳ ಜೀವನದಲ್ಲಿ ಹೊಸ ಸಂತೋಷದ ಅಲೆಯನ್ನು ತರುತ್ತವೆ ಎಂದು ಅವರು ಹೇಳಿದರು. ಇದನ್ನೂ ಓದಿ : ಉಕ್ರೇನ್ ಅಧ್ಯಕ್ಷರಾದ ಝೆಲೆನ್ಸ್ಕಿ ಅವರೊಂದಿಗೆ ಪ್ರಧಾನಮಂತ್ರಿ ಮೋದಿ ಮಾತುಕತೆ

ನದಿಗಳಿಗೆ ಹೆಸರಿಡುವ ಸಂಪ್ರದಾಯವು ದೇಶವನ್ನು ಏಕತೆಯ ಎಳೆಯಲ್ಲಿ ಬಂಧಿಸುತ್ತದೆ ಎಂದು ಅವರು ಹೇಳಿದರು. ಈ ಹೊಸ ಸಮುಚ್ಚಯವು ದೆಹಲಿಯಲ್ಲಿ ಸಂಸದರ ಜೀವನವನ್ನು ಇನ್ನಷ್ಟು ಸುಲಭಗೊಳಿಸುತ್ತದೆ. ದೆಹಲಿಯಲ್ಲಿ ಸಂಸದರಿಗೆ ಸರ್ಕಾರಿ ವಸತಿ ಸೌಕರ್ಯಗಳು ಈಗ ಹೆಚ್ಚಾಗಲಿವೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿಯವರು ಎಲ್ಲಾ ಸಂಸದರನ್ನು ಅಭಿನಂದಿಸಿದರು ಮತ್ತು ವಸತಿ ಸಮುಚ್ಚಯ ನಿರ್ಮಾಣದಲ್ಲಿ ಭಾಗಿಯಾದ ಎಂಜಿನಿಯರ್ ಗಳು ಮತ್ತು ಕಾರ್ಮಿಕರನ್ನು ಶ್ಲಾಘಿಸಿದರು. ಯೋಜನೆಯನ್ನು ಪೂರ್ಣಗೊಳಿಸುವಲ್ಲಿ ಅವರ ಸಮರ್ಪಣೆ ಮತ್ತು ಕಠಿಣ ಪರಿಶ್ರಮವನ್ನು ಅವರು ಶ್ಲಾಘಿಸಿದರು.

ಈ ಕಾರ್ಯಕ್ರಮದಲ್ಲಿ ಲೋಕಸಭಾಧ್ಯಕ್ಷ ಶ್ರೀ ಓಂ ಬಿರ್ಲಾ, ಕೇಂದ್ರ ಸಚಿವರು ಮತ್ತು ಸಂಸತ್ ಸದಸ್ಯರು ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.