ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕುವೈತ್ ಅಮೀರ್ ಮಾನ್ಯ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾಹ್ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು.

ಪಶ್ಚಿಮ ಏಷ್ಯಾದಲ್ಲಿನ ಪ್ರಸ್ತುತದ ಭದ್ರತಾ ಪರಿಸ್ಥಿತಿಯ ಕುರಿತು ಎರಡೂ ದೇಶಗಳ ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡರು. ಇದನ್ನೂ ಓದಿ : ರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭ 2026 (ಹಂತ-1) ರಲ್ಲಿ ಭಾಗವಹಿಸಿದ ಪ್ರಧಾನಮಂತ್ರಿ

ಹೆಚ್ಚುತ್ತಿರುವ ಉದ್ವಿಗ್ನತೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಪ್ರಧಾನಮಂತ್ರಿಗಳು ಕುವೈತ್‌ ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲಿನ ದಾಳಿಗಳನ್ನು ಭಾರತ ಬಲವಾಗಿ ಖಂಡಿಸುತ್ತದೆ ಎಂದು ಪುನರುಚ್ಚರಿಸಿದರು.

ಶಾಂತಿ ಮತ್ತು ಸ್ಥಿರತೆಯನ್ನು ಶೀಘ್ರವಾಗಿ ಪುನಃಸ್ಥಾಪಿಸಲು, ಉದ್ವಿಗ್ನತೆ ಶಮನಕ್ಕೆ ಮಾತುಕತೆ ಮತ್ತು ರಾಜತಾಂತ್ರಿಕ ಸಂಧಾನದ ಕರೆಯನ್ನು ಪ್ರಧಾನಮಂತ್ರಿ ಪುನರುಚ್ಚರಿಸಿದರು.

ಕುವೈತ್‌ ನಲ್ಲಿರುವ ಬೃಹತ್ ಭಾರತೀಯ ಸಮುದಾಯದ ನಿರಂತರ ಯೋಗಕ್ಷೇಮ ಮತ್ತು ಸುರಕ್ಷತೆಗೆ ವೈಯಕ್ತಿಕ ಗಮನ ಹರಿಸಿರುವ ಘನತೆವೆತ್ತ ಅಮೀರ್ ಅವರಿಗೆ ಪ್ರಧಾನಮಂತ್ರಿ ಕೃತಜ್ಞತೆ ಸಲ್ಲಿಸಿದರು.