ಶಿಕಾರಿಪುರದ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಜನಪ್ರಿಯ ಸಂಸದರಾದ ಶ್ರೀ B Y Raghavendra ಅವರ ಸಮ್ಮುಖದಲ್ಲಿ ತಾಲ್ಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.

ಮುಂಗಾರು ಮಳೆ ಎಲ್ಲೆಡೆ ಆರಂಭವಾಗಿದ್ದು ರೈತರ ಮುಂಗಾರು ಬಿತ್ತನೆಗೆ ಬಿತ್ತನೆ ಬೀಜಗಳ ಕೊರತೆಯಾಗದಂತೆ ಕ್ರಮ ವಹಿಸಬೇಕು, ಕುಡಿಯುವ ನೀರಿನ ಸಮಸ್ಯೆಗಳಾಗದಂತೆ ಕ್ರಮ ವಹಿಸಿ, ನಿತ್ಯ ಸುರಿಯುತ್ತಿರುವ ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು.

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು, ಆರೋಗ್ಯ ಇಲಾಖೆ ಹಾಗೂ ಕ್ಷೇತ್ರದ ವಿವಿಧ ಇಲಾಖೆಗಳ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ತುರ್ತಾಗಿ ಕೈಗೆತ್ತಿಕೊಳ್ಳಬೇಕಿರುವ ವಿವಿಧ ಕಾಮಗಾರಿಗಳ ಕುರಿತು ಸುದೀರ್ಘವಾಗಿ ಚರ್ಚಿಸಿ ಅಗತ್ಯ ಕ್ರಮ ವಹಿಸುವಂತೆ ನಿರ್ದೇಶನ ನೀಡಲಾಯಿತು. ಈ ವೇಳೆ ತಾಲ್ಲೂಕು ದಂಡಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.